ರಮೇಶ್ ಜಾರಕಿಹೊಳಿ, ಮಹಾಂತೇಶ್ ಕಮಟಳ್ಳಿ, ಬಿ. ನಾಗೇಂದ್ರ, ಉಮೇಶ್ ಜಾಧವ್, 
ರಾಜಕೀಯ

ಅನರ್ಹತೆ ಭೀತಿ: ನಾಲ್ವರು ಅತೃಪ್ತ ಕಾಂಗ್ರೆಸ್ ಶಾಸಕರು ಸದನಕ್ಕೆ ಹಾಜರು

ಬಿಜೆಪಿಯ ಆಪರೇಷನ್ ಕಮಲಕ್ಕೆ ಬಲಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಭಾವಿಸಲಾಗಿದ್ದ ಕಾಂಗ್ರೆಸ್ ನ ನಾಲ್ಕು ಬಂಡಾಯ ಶಾಸಕರಾದ...

ಬೆಂಗಳೂರು: ಬಿಜೆಪಿಯ ಆಪರೇಷನ್ ಕಮಲಕ್ಕೆ ಬಲಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂದು ಭಾವಿಸಲಾಗಿದ್ದ ಕಾಂಗ್ರೆಸ್ ನ ನಾಲ್ಕು ಬಂಡಾಯ ಶಾಸಕರಾದ ರಮೇಶ್ ಜಾರಕಿಹೊಳಿ, ಉಮೇಶ್ ಜಾಧವ್, ಮಹಾಂತೇಶ್ ಕಮಟಳ್ಳಿ, ಬಿ. ನಾಗೇಂದ್ರ ಹಾಗೂ ಜೆಡಿಎಸ್ ನಾರಾಯಣಗೌಡ ಅವರು ಬುಧವಾರ ಕೊನೆಗೂ ವಿಧಾನಸಭೆ ಕಲಾಪಕ್ಕೆ ಹಾಜರಾದರು. 
ಅಧಿವೇಶನ ಆರಂಭವಾದ ದಿನದಿಂದ ಕಲಾಪದಿಂದ ದೂರ ಉಳಿದಿದ್ದ ಈ ಶಾಸಕರು ಇಂದು ಪ್ರತ್ಯಕ್ಷರಾದರು. ಆದರೆ ಅವರ ನಡೆ ಇನ್ನೂ ನಿಗೂಢವಾಗಿಯೇ ಇದೆ. ಪಕ್ಷದ ಶಾಸಕಾಂಗ ಸಭೆ, ಅಧಿವೇಶನಕ್ಕೆ ಗೈರು ಹಾಜರಾಗಿದ್ದಈ ನಾಲ್ವರು ಕಾಂಗ್ರೆಸ್ ಶಾಸಕರನ್ನು ಸದಸ್ಯತ್ವದಿಂದ ಅನರ್ಹಗೊಳಿಸುವಂತೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ದೂರು ನೀಡಿದ ನಂತರ ಅನರ್ಹತೆ ಭೀತಿಯಿಂದ ಈ ಶಾಸಕರು ಇಂದು ಅಧಿವೇಶನದಲ್ಲಿ ಪಾಲ್ಗೊಂಡರು. 
ಅತೃಪ್ತ ಶಾಸಕ ನಾಗೇಂದ್ರ ಮಾತನಾಡಿ, ತಮಗೆ ಅಸಮಾಧಾನ ಇರುವುದು ನಿಜ, ಈ ಬಗ್ಗೆ ಹೈಕಮಾಂಡ್ ಜತೆ ಮಾತುಕತೆ ನಡೆಸುತ್ತೇನೆ. ಅಧಿವೇಶನದಲ್ಲಿ‌ ಪಾಲ್ಗೊಳ್ಳುವ ಉದ್ದೇಶದಿಂದ ಸದನಕ್ಕೆ ಆಗಮಿಸಿದ್ದೇನೆ. ಶಾಸಕತ್ವ ಅನರ್ಹತೆ ದೂರು ಸಂಬಂಧ  ಸಿದ್ದರಾಮಯ್ಯ ಅವರ ಜತೆಯೂ ಮಾತನಾಡುವುದಾಗಿ ಹೇಳಿದರು.
ರಮೇಶ್ ಜಾರಕಿಹೊಳಿ ಮಾತನಾಡಿ, ತಾವು ಪಕ್ಷ ತೊರೆದಿಲ್ಲ. ಮಗಳ ಮದುವೆ ಹಿನ್ನೆಲೆಯಲ್ಲಿ ಸ್ನೇಹಿತರು ಮತ್ತು ಸಂಬಂಧಿಕರನ್ನು ಭೇಟಿ ಮಾಡಲು ಮುಂಬೈಗೆ ತೆರಳಿದ್ದೆ. ಬಿಜೆಪಿಯಲ್ಲೂ ನಮ್ಮ ಸ್ನೇಹಿತರಿದ್ದು, ಉಮೇಶ್ ಕತ್ತಿ ಅವರ ಮನೆಗೂ ಸಹ ಹೋಗುತ್ತೇನೆ. ಹಾಗೆಂದ ಮಾತ್ರಕ್ಕೆ ಬಿಜೆಪಿ ಸೇರುತ್ತೇನೆ ಎಂಬ ಅರ್ಥವಲ್ಲ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದೆ. ಆ ಮಾತಿಗೆ ಈಗಲೂ ಬದ್ಧ ಎಂದರು.
ಮತ್ತೋರ್ವ ಅತೃಪ್ತ ಶಾಸಕ ಮಹೇಶ್ ಕುಮಟಳ್ಳಿ ಸಹ, ತಮಗೂ ಪಕ್ಷದ ಬಗ್ಗೆ ಅಸಮಾಧಾನ ಇತ್ತು. ಅದು ವಿಕೋಪಕ್ಕೆ ಹೋಗಿತ್ತು. ಇದೀಗ ಪಕ್ಷದ ಹಿರಿಯ ನಾಯಕರ ಜತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳುತ್ತೇನೆ. ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ರಮೇಶ್ ಜಾರಕಿಹೊಳಿ ಅವರು ತಮ್ಮನ್ನು ಬಂಧನದಲ್ಲಿಟ್ಟುಕೊಂಡಿರಲಿಲ್ಲ. ಸಿದ್ದರಾಮಯ್ಯ ಸೇರಿ ಎಲ್ಲರನ್ನು ಭೇಟಿಮಾಡುತ್ತೇನೆ. ಕಲಾಪದಲ್ಲೂ ಪಾಲ್ಗೊಳ್ಳುತ್ತೇನೆ. ನಾನು ಪಕ್ಷದಲ್ಲೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.
ಅಪ್ಪ- ಮಕ್ಕಳ ಜಗಳದಲ್ಲಿ ಕೂಸು ಬಡವಾಯಿತು ಎನ್ನುವ ಪರಿಸ್ಥಿತಿ ತಮ್ಮದಾಗಿದೆ. ಪಕ್ಷದಲ್ಲಿ ನಾಯಕರ ನಡುವಿನ ಜಗಳದಲ್ಲಿ ನಾವು ಬಡವಾಗಿದ್ದೇವೆ ಎಂದು ಮಾರ್ಮಿಕವಾಗಿ ನುಡಿದ ಅವರು, ತಮ್ಮ ಆರೋಗ್ಯ ಸರಿ ಇರಲಿಲ್ಲ. ಹಾಗಾಗಿ ಶಾಸಕಾಂಗ ಸಭೆ ಮತ್ತು ಸದನಕ್ಕೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಇಷ್ಟಕ್ಕೂ ತಾವು ಬಿಜೆಪಿ ಸಂಪರ್ಕದಲ್ಲಿ ಇಲ್ಲ. ಯಾವ ಅತೃಪ್ತರ ಜೊತೆಯೂ ತಾವಿಲ್ಲ ಎಂದರು. 
ತಾವು ಬಂಡಾಯ ಶಾಸಕರ ಜೊತೆ ಗುರುತಿಸಿಕೊಂಡಿಲ್ಲ. ನನಗೆ ಯಾರ ಜೊತೆಗೂ ಯಾವುದೇ ಸಮಸ್ಯೆ ಇಲ್ಲ. ತಮ್ಮಿಂದ ತಪ್ಪಾಗಿದ್ದರೆ ಯಾವುದೇ ಶಿಕ್ಷೆ ಎದುರಿಸಲು ಸಿದ್ಧ ಸಂಪರ್ಕಕಕ್ಕೆ ಸಿಗದೇ ನಾಪತ್ತೆ ಆಗಿದ್ದ ಚಿಂಚೋಳಿ ಶಾಸಕ ಉಮೇಶ್ ಜಾಧವ್ ಅವರು ಹೇಳಿದ್ದಾರೆ.
ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಪ್ರತಿಕ್ರಿಯಿಸಿದ ಉಮೇಶ್ ಜಾಧವ್, ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಸಮಯ ಬಂದಾಗ ಮಾತನಾಡುತ್ತೇನೆ. ವಿಚಾರ ಮಾಡಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ. ಒಳ್ಳೆಯ ಕೆಲಸ ಮಾಡಿದವರಿಗೆ ದುರಂತ ಅಂತ್ಯ ಹೇಳುವುದು ಸರಿಯಲ್ಲ. ಸಮಸ್ಯೆ ತುಂಬಾ ಇವೆ. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ಸಚಿವರಾದ್ರೆ ಕೆಲಸ ಆಗುತ್ತೆ ಎಂಬುದು ಕ್ಷೇತ್ರದ ಜನರ ಅಭಿಪ್ರಾಯವಾಗಿದೆ ಎಂದರು. 
ರಾಜೀನಾಮೆ ನೀಡಬೇಕೋ, ಬೇಡವೋ ಎಂಬ ಗೊಂದಲದಲ್ಲಿದ್ದೇನೆ. ಜನರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ.  ಬಿಜೆಪಿ ನಾಯಕರು ತಮ್ಮನ್ನು ಸಂಪರ್ಕಿಸಿಲ್ಲ. ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ವಿಚಾರದಲ್ಲೂ ಯಾವುದೇ ಸಿದ್ಧತೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT