ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ಪ್ರೀತಂ ಗೌಡ ವಿರುದ್ಧ ಪ್ರತಿಭಟನೆ ನಡೆಸದಂತೆ ಜೆಡಿಎಸ್ ಕಾರ್ಯಕರ್ತರಿಗೆ ಸಿಎಂ ಮನವಿ

ಹಾಸನದ ಸ್ಥಳೀಯ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ವಿರುದ್ಧ ಯಾವುದೇ ಪ್ರತಿಭಟನೆ ನಡೆಸದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ...

ಬೆಂಗಳೂರು: ಹಾಸನದ ಸ್ಥಳೀಯ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ವಿರುದ್ಧ ಯಾವುದೇ ಪ್ರತಿಭಟನೆ ನಡೆಸದಂತೆ ಮುಖ್ಯಮಂತ್ರಿ  ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ಶಾಸಕರ ಮನೆಯ ಸಮೀಪ ಕೆಲ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾಹಿತಿ ತಿಳಿದ ತಕ್ಷಣ ಹಾಸನ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಿಎಂ, ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿರುವ ವ್ಯಕ್ತಿಗಳು ಯಾರೇ ಆಗಿದ್ದರೂ ನಿರ್ದಾಕ್ಷಿಣ್ಯವಾಗಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದಾರೆ. 
ಪರಿಸ್ಥಿತಿಗೆ ಅನುಗುಣವಾಗಿ ರಾಜಕೀಯ ವಿದ್ಯಮಾನಗಳನ್ನು ನಿರ್ವಹಿಸುವ ಶಕ್ತಿ ತಮಗಿದೆ. ಪಕ್ಷದ ಕಾರ್ಯಕರ್ತರು ಯಾವುದೇ ಪ್ರಚೋದನೆಗೆ ಒಳಗಾಗಬಾರದು. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಬಾರದು ಎಂದು ಕೋರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ