ಉಮೇಶ್ ಜಾಧವ್ 
ರಾಜಕೀಯ

ಪಕ್ಷ ತೊರೆಯುವುದಿಲ್ಲ, ಸರ್ಕಾರ ಬೀಳಿಸುವುದಿಲ್ಲ: ಉಲ್ಟಾ ಹೊಡೆದ ಉಮೇಶ್ ಜಾಧವ್

ನಾನು ಕಾಂಗ್ರೆಸ್‌ ಪಕ್ಷದಲ್ಲೇ ಇರುತ್ತೇನೆ, ಸರ್ಕಾರ ಬೀಳಿಸುವ ಕೆಲಸ ನಾನೆಂದೂ ಮಾಡಿಲ್ಲ, ಮಾಡುವುದು ಇಲ್ಲ, ಕಾಂಗ್ರೆಸ್ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ ...

ಬೆಂಗಳೂರು: ನಾನು ಕಾಂಗ್ರೆಸ್‌ ಪಕ್ಷದಲ್ಲೇ ಇರುತ್ತೇನೆ, ಸರ್ಕಾರ ಬೀಳಿಸುವ ಕೆಲಸ ನಾನೆಂದೂ ಮಾಡಿಲ್ಲ, ಮಾಡುವುದು ಇಲ್ಲ, ಕಾಂಗ್ರೆಸ್ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ ಎಂದು ಚಿಂಚೋಳಿ ಶಾಸಕ ಉಮೇಶ್ ಜಾಧವ್ ಸ್ಪಷ್ಟಪಡಿಸಿದ್ದಾರೆ. 
ಕಳೆದ ಒಂದು ವಾರದಿಂದ ಕಣ್ಮರೆಯಾಗಿದ್ದ ಉಮೇಶ್‌ ಯಾದವ್‌, ಇಂದು ಬೆಂಗಳೂರಿಗೆ ಆಗಮಿಸಿದರು.  ಈ ವೇಳೆ ಮಾತನಾಡಿದ ಅವರು ಬಿಜೆಪಿ ಸೇರ್ಪಡೆ ಹಾಗೂ ಸರ್ಕಾರ ಬೀಳಿಸುವ ಕೆಲಸ ಮಾಡಲಾಗುತ್ತಿದೆ ಎಂಬ ಎಲ್ಲಾ ಊಹಾ ಪೋಹಗಳಿಗೆ ತೆರೆ ಎಳೆದಿದ್ದಾರೆ. 
ವೈಯಕ್ತಿಕ ಕಾರಣದಿಂದಾಗಿ ನಾನು ಸಿಎಲ್ ಪಿ ಸಭೆಗೆ ಬಂದಿರಲಿಲ್ಲ. ತಾನು ಕ್ಷೇತ್ರದಲ್ಲಿಯೇ ಇದ್ದೆ. ಈ ಬಗ್ಗೆ  ನಾಯಕರ ಜೊತೆ ಮಾತಾನಾಡುತ್ತೇನೆ. ನಾನು ಪಕ್ಷಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಸ್ಥಳೀಯವಾಗಿ ನನ್ನ ಕ್ಷೇತ್ರದಲ್ಲಿ ಸಮಸ್ಯೆಗಳಿವೆ. ಅದನ್ನು ನಮ್ಮ ನಾಯಕರಿಗೆ ಮನವರಿಕೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಇಂದು ಮುಂಜಾನೆ ಶಾಸಕರ ಭವನದಲ್ಲಿರುವ ಕೊಠಡಿಗೆ  ಉಮೇಶ್ ಜಾಧವ್ ಆಗಮಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ