ರಮೇಶ್ ಜಾರಕಿ ಹೊಳಿ ಮತ್ತು ಮಹೇಶ್ ಕುಮಟಳ್ಳಿ 
ರಾಜಕೀಯ

ಕಾಂಗ್ರೆಸ್ ಗೆ 4 ಅತೃಪ್ತ ಶಾಸಕರು ವಾಪಸ್?: ರಮೇಶ್ ಜಾರಕಿಹೊಳಿ ನಡೆ ಇನ್ನೂ ನಿಗೂಢ!

ಳೆದ ಹಲವು ದಿನಗಳಿಂದ ಯಾರ ಕೈಗೂ ಸಿಗದೇ ಅಜ್ಞಾತವಾಗಿದ್ದ ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿ ಹೊಳಿ ಮತ್ತು ಮಹೇಶ್ ಕುಮಟಳ್ಳಿ ಯಾವುದೇ ...

ಬೆಂಗಳೂರು: ಕಳೆದ ಹಲವು ದಿನಗಳಿಂದ ಯಾರ ಕೈಗೂ ಸಿಗದೇ ಅಜ್ಞಾತವಾಗಿದ್ದ ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿ ಹೊಳಿ ಮತ್ತು ಮಹೇಶ್ ಕುಮಟಳ್ಳಿ ಯಾವುದೇ ಬೇರೆ ಆಯ್ಕೆಯಿಲ್ಲದೇ ಕಾಂಗ್ರೆಸ್ ಗೆ ಮರಳಲಿದ್ದಾರೆ ಎಂದು ಹೇಳಲಾಗುತ್ತಿದೆ.
ನಾಲ್ಕು ಕಾಂಗ್ರೆಸ್ ಶಾಸಕರ ವಿರುದ್ಧ ಸ್ಪೀಕರ್ ಗೆ ಮನವಿ ಸಲ್ಲಿಸಿದ್ದ ಕಾಂಗ್ರೆಸ್  ರಮೇಶ್ ಜಾರಕಿಹೊಳಿ ಮಹೇಶ್ ಕುಮಟಳ್ಳಿ ಸೇರಿದಂತೆ 4 ಅತೃಪ್ತ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿತ್ತು, 
ಮೂಲಗಳ ಪ್ರಕಾರ ಜಾರಕಿಹೊಳಿ ಮತ್ತು ಕುಮಟಳ್ಳಿ ಇನ್ನೂ ಮುಂಬಯಿಯಲ್ಲೇ ವಾಸ್ತವ್ಯ ಹೂಡಿದ್ದು, ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ, ಬಿಜೆಪಿ ಸೇರುವುದನ್ನು ಬಿಟ್ಟರೇ ಅವರಿಗೆ ಬೇರೆ ಯಾವುದೇ ಪರ್ಯಾಯ ಮಾರ್ಗವಿಲ್ಲ ಎಂದು ಮೂಲಗಳು ತಿಳಿಸಿವೆ, ಎಐಸಿಸಿ ಕಾರ್ಯದರ್ಶಿ ಕೆ,ಸಿ ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ನ ಒಂದು ತಂಡ ಜಾರಕಿಹೊಳಿ ಜೊತೆ ಮಾತನಾಡಿದ್ದರು, ಜೊತೆಗೆ ಪಕ್ಷಕ್ಕೆ ಮರಳುವಂತೆ ಹೇಳಿದ್ದರು.
ರಾಜಕೀಯ ದೊಂಬರಾಟಕ್ಕೆ ಅಂತ್ಯ ಹಾಡಲು ನಿರ್ದರಿಸಿರುವ ಕಾಂಗ್ರೆಸ್ ಅತೃಪ್ತರಿಗೆ ಸಂಪುಟದಲ್ಲಿ ಅವಕಾಶ ನೀಡಲು ನಿರ್ಧರಿಸಿದೆ. ಆದರೆ  ಕೆ,ಸಿ ವೇಣುಗೋಪಾಲ್ ಕೋರಿಕೆಗೆ ಜಾರಕಿಹೊಳಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಕೇಳಿ ಬಂದಿದೆ.
ಸಹೋದರರಾದ ಬಾಲಚಂದ್ರ ಮತ್ತು ಲಖನ್ ಜಾರಕಿಹೊಳಿ, ಬಿಜೆಪಿ ಸೇರುವ ಪ್ರಯತ್ನ ಬಿಡಬೇಕೆಂದು  ರಮೇಶ್ ಜಾರಕಿ ಹೊಳಿಗೆ ಹೇಳಿದ್ದಾರೆ, ಆದರೆ ರಮೇಶ್ ಮತ್ತು ಮಹೇಶ್ ಕುಮಟಳ್ಳಿ ಫೋನ್ ಗಳು ಸ್ವಿಚ್ ಆಫ್ ಆಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT