ವಿಧಾನಸಭೆ 
ರಾಜಕೀಯ

ಗದ್ದಲದ ನಡುವೆಯೇ ಹಣಕಾಸು ಮಸೂದೆಗೆ ವಿಧಾನಸಭೆ ಅನುಮೋದನೆ

ಬಿಜೆಪಿ ಸದಸ್ಯರ ಧರಣಿ, ಗದ್ದಲದ ನಡುವೆಯೇ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ ಮತ್ತು ಹಣಕಾಸು ಮಸೂದೆಗಳಿಗೆ ಗುರುವಾರ...

ಬೆಂಗಳೂರು: ಬಿಜೆಪಿ ಸದಸ್ಯರ ಧರಣಿ, ಗದ್ದಲದ ನಡುವೆಯೇ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ ಮತ್ತು ಹಣಕಾಸು ಮಸೂದೆಗಳಿಗೆ ಗುರುವಾರ ವಿಧಾನಸಭೆ ಅನುಮೋದನೆ ನೀಡಿದೆ. 
ರಾಜ್ಯಪಾಲ ವಜೂಭಾಯಿ ವಾಲಾ ಅವರು ಈ ತಿಂಗಳ 6 ರಂದು ಜಂಟಿ ಅಧಿವೇಶನವನ್ನುದ್ದೇಶಿಸಿ ಮಾಡಿದ್ದ ಭಾಷಣದ ಮೇಲಿನ ವಂದನೆ ಸಲ್ಲಿಸುವ ನಿರ್ಣಯ ಕುರಿತ ಪ್ರಸ್ತಾವವನ್ನು ಧರಣಿ ನಡುವೆಯೇ ಅಂಗೀಕರಿಸಲಾಯಿತು. 
2019 - 2020ನೇ ಸಾಲಿನ 80168 ಕೋಟಿ ರೂ ಲೇಖಾನುದಾನ ಹಾಗೂ 14581 ಕೋಟಿ ರೂ ಪೂರಕ ಅಂದಾಜು ಧನ ವಿನಿಯೋಗ ಕುರಿತ ಹಣಕಾಸು ಮಸೂದೆಗಳಿಗೆ ಸದನ ಅಂಗೀಕರಿಸಿದೆ.
ಹಣಕಾಸು ಇಲಾಖೆಯ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ಬಿಜೆಪಿ ಸದಸ್ಯರ ಧರಣಿ ಮತ್ತು ಪ್ರತಿಭಟನೆ ನಡುವೆಯೇ ಮಸೂದೆಗಳನ್ನು ಮಂಡಿಸಿದರು. ಸಭಾಧ್ಯಕ್ಷ ರಮೇಶ್ ಕುಮಾರ್ ಮಸೂದೆಗಳನ್ನು ಮತಕ್ಕೆ ಹಾಕಿದಾಗ ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಈ ಪ್ರಕ್ರಿಯೆ ಕೆಲವೇ ನಿಮಿಷಗಳಲ್ಲಿ ಮುಕ್ತಾಯವಾಯಿತು.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಳೆದ ಶುಕ್ರವಾರ 2.34 ಲಕ್ಷ ಕೋಟಿ ರೂ ಮೊತ್ತದ 2019 - 20 ನೇ ಸಾಲಿನ ಆಯವ್ಯಯ ಮಂಡಿಸಿದ್ದರು.
ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಗೌಡ ಅವರ ನಿವಾಸದ ಮೇಲೆ ಜೆಡಿಎಸ್ ಕಾರ್ಯಕರ್ತರು ದಾಳಿ ನಡೆಸಿರುವ ಪ್ರಕರಣವನ್ನು ಮುಂದಿಟ್ಟುಕೊಂಡು, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಸದಸ್ಯರು ಸದನದಲ್ಲಿ ಧರಣಿ ನಡೆಸಿದರು. ಧರಣಿ ನಡುವೆಯೇ ಮಸೂದೆಗಳಿಗೆ ಅನುಮೋದನೆ ದೊರೆಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ