ಅತೃಪ್ತ ಶಾಸಕರಿಂದ ಸಿದ್ದರಾಮಯ್ಯ ಭೇಟಿ 
ರಾಜಕೀಯ

ಕಾಂಗ್ರೆಸ್ ಅತೃಪ್ತ ಶಾಸಕರಿಂದ ಸಿದ್ದರಾಮಯ್ಯ ಭೇಟಿ

ಕಾಂಗ್ರೆಸ್ ಅತೃಪ್ತ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಬಿ ನಾಗೇಂದ್ರ ಅವರು ಶುಕ್ರವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಅತೃಪ್ತ ಶಾಸಕರಾದ ರಮೇಶ್ ಜಾರಕಿಹೊಳಿ ಹಾಗೂ ಬಿ ನಾಗೇಂದ್ರ ಅವರು ಶುಕ್ರವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.
ಈ ಇಬ್ಬರು ಅತೃಪ್ತ ಶಾಸಕರೊಂದಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಸಹ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.
ನಾಲ್ವರು ಅತೃಪ್ತ ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ, ಬಿ.ನಾಗೇಂದ್ರ, ಉಮೇಶ್ ಜಾಧವ್ ಹಾಗೂ ಮಹೇಶ್ ಕುಮಟಳ್ಳಿ ಅವರು ಪಕ್ಷದ ವಿಪ್ ಉಲ್ಲಂಘಿಸಿ ಶಾಸಕಾಂಗ ಪಕ್ಷದ ಸಭೆಗೆ ಹಾಗೂ ಬಜೆಟ್ ಅಧಿವೇಶನಕ್ಕೆ ಗೈರು ಆಗಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಸೋಮವಾರ ಈ ನಾಲ್ವರನ್ನು ಶಾಸಕತ್ವದಿಂದ ಅನರ್ಹಗೊಳಿಸುವಂತೆ ಸಿದ್ದರಾಮಯ್ಯ ಅವರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ದೂರು ನೀಡಿದ್ದರು. 
ಅನರ್ಹತೆ ಭೀತಿಯಿಂದ ತಪ್ಪಿಸಿಕೊಳ್ಳಲು ಈ ನಾಲ್ವರು ಅತೃಪ್ತ ಕಾಂಗ್ರೆಸ್ ಶಾಸಕರು ಕೊನೆಯ ಒಂದು ದಿನ ಮಾತ್ರ ಅಧಿವೇಶನಕ್ಕೆ ಹಾಜರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ