ರಾಜಕೀಯ

ಬಿಎಸ್ ವೈ ಆಡಿಯೊ ಟೇಪ್ ಕೇಸು; ತೀರ್ಪು ಕಾಯ್ದಿರಿಸಿದ ಹೈಕೋರ್ಟ್

Sumana Upadhyaya

ಕಲಬುರಗಿ: ರಾಯಚೂರು ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಗುರುಮಿಟ್ಕಲ್ ಶಾಸಕ ನಾಗನಗೌಡ ಪಾಟೀಲ್ ಕಂಡಕೂರು ಅವರ ಪುತ್ರ ಶರಣಗೌಡ ಪಾಟೀಲ್ ಸಲ್ಲಿಸಿದ್ದ ಎಫ್ ಐಆರ್ ನ್ನು ರದ್ದುಪಡಿಸಬೇಕೆಂದು ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ರಾಜ್ಯ ಹೈಕೋರ್ಟ್ ನ ಕಲಬುರಗಿ ಪೀಠ ತೀರ್ಪನ್ನು ಕಾಯ್ದಿರಿಸಿದೆ.

ಬಿ ಎಸ್ ಯಡಿಯೂರಪ್ಪ, ದೇವದುರ್ಗ ಶಾಸಕ ಶಿವನಗೌಡ ನಾಯಕ್ ಮತ್ತು ಮಾಜಿ ಪತ್ರಕರ್ತ ಎಂ ಬಿ ಮರಮ್ಕಲ್ ಅವರ ವಿರುದ್ಧದ ಎಫ್ ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪಿ ಜಿ ಎಂ ಪಾಟೀಲ್ ವಿಚಾರಣೆ ನಡೆಸಿದರು.

ಯಡಿಯೂರಪ್ಪ ಅವರ ಪರವಾಗಿ ಸಿ ವಿ ನಾಗೇಶ್, ಮಾಜಿ ಅಡ್ವೊಕೇಟ್ ಜನರಲ್ ಅಶೋಕ್ ಹಾರನಹಳ್ಳಿ ನಾಯಕ್ ಮತ್ತು ಮರಮ್ಕಲ್ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಿದರು.ಪ್ರಾಸಿಕ್ಯೂಟರ್ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಂಜಯ್ ಚೌಟ ವಾದಿಸಿದರು. ತನಿಖೆಗೆ ಮಧ್ಯಂತರ ತಡೆ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಕಾಯ್ದಿರಿಸಲಾಗಿದೆ.

SCROLL FOR NEXT