ಸಂಗ್ರಹ ಚಿತ್ರ 
ರಾಜಕೀಯ

ಖರ್ಗೆ ಪ್ರಧಾನಿಯಾದರೂ ಅಚ್ಚರಿಪಡಬೇಕಿಲ್ಲ- ಶಾಮನೂರು ಶಿವಶಂಕರಪ್ಪ

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಂದಿನ ಪ್ರಧಾನಿಯಾದರೂ ಅಚ್ಚರಿಪಡಬೇಕಿಲ್ಲ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ದಾವಣಗೆರೆ:  ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮುಂದಿನ  ಪ್ರಧಾನಿಯಾದರೂ ಅಚ್ಚರಿಪಡಬೇಕಿಲ್ಲ ಎಂದು ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಛಲವಾದಿ ಮಹಾಸಭಾ ವತಿಯಿಂದ ಏರ್ಪಡಿಸಲಾಗಿದ್ದ ಅಭಿನಂದನಾ ಹಾಗೂ ಜನ ಜಾಗೃತಿ ಸಮಾವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಿವಶಂಕರಪ್ಪ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ತಾಕತ್ತು ರಾಹುಲ್ ಗಾಂಧಿಗೆ ಇಲ್ಲ. ಆದರೆ, ಕಾಂಗ್ರೆಸ್ ಹಿರಿಯ ನಾಯ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದೆ ಎಂದರು.

ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಅಷ್ಟೇ ಅಲ್ಲ. ದೇಶದ ಪ್ರಧಾನಿಯಾಗುವ ಅರ್ಹತೆ ಹೊಂದಿದ್ದಾರೆ. ಮುಂದೆ ಅವರು ಪ್ರಧಾನಿಯಾದರೂ ಅಚ್ಚರಿಪಡಬೇಕಿಲ್ಲ ಎಂದು ಅಭಿಪ್ರಾಯಪಟ್ಟರು.

ರಾಜ್ಯದ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಮೊದಲ ದಲಿತ ಮುಖಂಡ ದಿವಂಗತ ಕೆ. ಎಚ್ , ರಂಗನಾಥ್,  ದಿ. ಬಸವಲಿಂಗಪ್ಪ ಅವರಿಗೆ ಮುಖ್ಯಮಂತ್ರಿ ಆಗುವ ಅವಕಾಶ ಇತ್ತು. ಆದರೆ, ಅವರು ಮುಖ್ಯಮಂತ್ರಿ ಆಗಲಿಲ್ಲ. ಈಗ ಮಲ್ಲಿಕಾರ್ಜುನ ಖರ್ಗೆ ಅವರು ಕೇವಲ ರಾಜ್ಯದ ಮುಖ್ಯಮಂತ್ರಿ ಅಷ್ಟೇ ಅಲ್ಲ, ದೇಶದ ಪ್ರಧಾನಿಯಾಗುವ ಅರ್ಹತೆ ಹೊಂದಿದ್ದಾರೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು.

ಇದೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ , ನನ್ನಗೆ ಮೂರು ಬಾರಿ ಮುಖ್ಯಮಂತ್ರಿ ಅವಕಾಶ ಕಿತ್ತುಕೊಳ್ಳಲಾಯಿತು. ಬೇಕೋ ಬೇಡವೋ ಎಂಬಂತೆ ಉಪಮುಖ್ಯಮಂತ್ರಿ ಸ್ಥಾನ ನೀಡಿದ್ದಾರೆ. ತಮ್ಮನ್ನು ತುಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT