ಹಾಸನ: ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ತಮ್ಮ ತಾತ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಸ್ಪರ್ಧಿಸಿದರೆ ಅವರ ಗೆಲುವಿಗೆ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ಜವಾಬ್ದಾರಿ ವಹಿಸಿಕೊಳ್ಳುವುದಾಗಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.
ಹಾಸನದಲ್ಲಿ ಅವರು ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿ, ಹಾಸನ ಕ್ಷೇತ್ರದಿಂದ ತಮ್ಮನ್ನು ಸ್ಪರ್ಧಿಸುವಂತೆ ತಾತ ಹೆಚ್ ಡಿ ದೇವೇಗೌಡರು ಹೇಳಿದ್ದರು, ಅದರಂತೆ ತಾನು ಮಾನಸಿಕವಾಗಿ ಸಿದ್ದನಾಗಿದ್ದೆ ಎಂದು ಹೇಳಿದ್ದಾರೆ.
ಹಾಸನ ಜಿಲ್ಲೆಯ ಎಲ್ಲಾ ಏಳು ತಾಲ್ಲೂಕುಗಳಲ್ಲಿ ತಾನು ಪ್ರವಾಸ ಮಾಡಿದ್ದು ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ದೇವೇಗೌಡರ ಸೂಚನೆ ಪ್ರಕಾರ ನಾನು ಕೆಲಸ ಮಾಡುತ್ತೇನೆ. ಈ ಬಾರಿ ಚುನಾವಣೆಯಲ್ಲಿ ದೇವೇಗೌಡರು 5 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಪ್ರಜ್ವಲ್ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.