ಸಂಗ್ರಹ ಚಿತ್ರ 
ರಾಜಕೀಯ

ಪ್ರಧಾನಿ ಮೋದಿ ದೇಶಭಕ್ತಿ ಪ್ರಶ್ನಿಸಲು ಸಾಧ್ಯವಿಲ್ಲ: ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಪ್ರಧಾನಿ ನರೇಂದ್ರ ಮೋದಿ ಅವರ ದೇಶಭಕ್ತಿಯನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪಕ್ಷದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರ ದೇಶಭಕ್ತಿಯನ್ನು ಪ್ರಶ್ನಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಪಕ್ಷದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ಸೋಮವಾರ ರಾತ್ರಿ 'ಜಯ ಕರ್ನಾಟಕ ಸೈನ್ಯ' ಸಂಘಟನೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 'ಪ್ರಧಾನಿ ನರೇಂದ್ರ ಮೋದಿ ಅವರ ದೇಶಭಕ್ತಿಯನ್ನು ಯಾರೂ ಪ್ರಶ್ನಿಸಲು ಸಾಧ್ಯವಿಲ್ಲ, ಸಮಾಜದ ಎಲ್ಲ ಕ್ಷೇತ್ರಗಳಂತೆಯೇ ರಾಜಕೀಯದಲ್ಲೂ ಒಳ್ಳೆಯ ರಾಜಕಾರಣಿಗಳಿರುತ್ತಾರೆ. ಸಮಾಜಮುಖಿಯಾಗಿ, ಸಮಾಜಕ್ಕೋಸ್ಕರ ಬದುಕುತ್ತಿರುವ ಹಲವ ರಾಜಕಾರಣಿಗಳು ನಮ್ಮ ಕಣ್ಣಮುಂದೆಯೇ ಇದ್ದಾರೆ. ಈ ಪೈಕಿ ಸಿಎಂ ಕುಮಾರಸ್ವಾಮಿ ಅವರ ಸಮಾಜಮುಖಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರೈತರಿಗಾಗಿ ಹೋರಾಟ ಮಾಡಿ ಸುಮಾರು 50 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದ್ದಾರೆ. ಇವರೇನೂ ಮೋಸಗಾರರಲ್ಲ. ನಮ್ಮ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಜಾರಿಗೆ ತಂದಿದ್ದ ಪ್ರಜಾ ಸ್ನೇಹಿ ಯೋಜನೆಗಳಿಂದ ಇಂದು ಸಮಾಜದ ಹಲವು ವರ್ಗದ ಜನರು ಫಲ ಅನುಭವಿಸುತ್ತಿದ್ದಾರೆ. ಅವರೆಂದೂ ಮೋಸಗಾರರಾಗಲು ಸಾಧ್ಯವೇ ಇಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಲಕ್ಷ್ಮೀ ಹೆಬ್ಬಾಳ್ಕರ್ ಅವರ ಈ ವಿಡಿಯೋ ಇದೀಗ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament special session: ಅಗ್ನಿ ಪರೀಕ್ಷೆಯಲ್ಲಿ ಮೋದಿ ಸರ್ಕಾರ, ಇಂದು ಪಾಸ್ ಆಗುತ್ತಾ ಪ್ರಮುಖ ಮಸೂದೆಗಳು?

'ಇರಾನ್ ತನ್ನ ಸಮೃದ್ಧ ಯುರೇನಿಯಂ ಸಂಗ್ರಹವನ್ನು ಹಸ್ತಾಂತರಿಸಲು ಒಪ್ಪಿಕೊಂಡಿದೆ, ಶಾಂತಿ ಒಪ್ಪಂದ ಹತ್ತಿರದಲ್ಲಿದೆ': Donald Trump

ಕಾಳಿ ಮಾತೆಯ ಬಣ್ಣ ಕಪ್ಪು: ಪ್ರಧಾನಿ ನರೇಂದ್ರ ಮೋದಿಯ 'ಕಾಲ ಟಿಕಾ' ಟೀಕೆ ವಿರುದ್ಧ ಕನ್ನಿಮೋಳಿ ಆಕ್ರೋಶ!

ಇನ್ಮುಂದೆ ನೇಚರ್ ಗೈಡ್, GPS ವಾಕಿಟಾಕಿ ಇಲ್ಲದೆ ಯಾರಿಗೂ ಚಾರಣಕ್ಕೆ ಅವಕಾಶವಿಲ್ಲ: SOP ಬಿಡುಗಡೆ ಮಾಡಿದ ಸಚಿವ ಈಶ್ವರ ಖಂಡ್ರೆ!

ವಿಜ್ಞಾನ-ತಂತ್ರಜ್ಞಾನ ಕ್ಷೇತ್ರ: ಮಹಿಳೆಯರದ್ದು ಪ್ರಧಾನ ಪಾತ್ರ; ಕೇವಲ ಪಾಲ್ಗೊಳ್ಳುವುದಲ್ಲ, ನಾಯಕತ್ವಕ್ಕೂ ಬೇಕು ನಾರಿ ಶಕ್ತಿ

SCROLL FOR NEXT