ಡಿ.ಕೆ ಶಿವಕುಮಾರ್ ಮತ್ತು ಸುಮಲತಾ ಅಂಬರೀಷ್ 
ರಾಜಕೀಯ

ಮಂಡ್ಯ ಕ್ಷೇತ್ರ ಜೆಡಿಎಸ್ ಗೆ: ಡಿಕೆಶಿ ಬಾಂಬ್ ಗೆ 'ಕೈ' ನಾಯಕರಲ್ಲಿ ಇರುಸು-ಮುರುಸು; ಸುಮಲತಾ ಆಸೆಗೆ ಎಳ್ಳುನೀರು?

ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿರುವ ಬೆನ್ನಲ್ಲೇ, ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟಿಕೊಡುವುದಾಗಿ ...

ಬೆಂಗಳೂರು: ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿರುವ ಬೆನ್ನಲ್ಲೇ, ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್  ಬಾಂಬ್ ಸಿಡಿಸಿದ್ದಾರೆ,
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್ ಮಂಡ್ಯ ಲೋಕಸಭೆ ಕ್ಷೇತ್ರ ಸಂಬಂಧಿಸಿದಂತೆ ಬೇರೆಯೇ ನಿರ್ಣಯ ಆಗಿದೆ, ಮಂಡ್ಯದ ಎಲ್ಲಾ ವಿಧಾನಸಭೆ ಕ್ಷೇತ್ರಗಳನ್ನು ಜೆಡಿಎಸ್ ಶಾಸಕರಿದ್ದಾರೆ, ಹೀಗಾಗಿ ಮಂಡ್ಯವನ್ನು ಜೆಡಿಎಸ್ ಗೆ ಬಿಟ್ಟುಕೊಡಲಿದ್ದೇವೆ ಎಂದು ಹೇಳಿದ್ದಾರೆ.
ಇನ್ನೂ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆದು ಸ್ಪರ್ಧಿಸಬೇಕೆಂದು ಬಯಸಿದ್ದ ಸುಮಲತಾ ಅಂಬರೀಷ್ ಅವರ ಆಸೆಗೆ ತಣ್ಣಿರೆರಚಿದಂತಾಗಿದೆ.
ಮಂಡ್ಯದ ಕೆಲ ಕಾರ್ಯಕರ್ತರು ಸುಮಲತಾರನ್ನ ಒತ್ತಾಯಿಸಿದ್ದಾರೆ. ನಾವು ಸುಮಲತಾ ಅವರ ಮನವೊಲಿಸುವ ಕೆಲಸ ಮಾಡುತ್ತೇವೆ. ಕಾರ್ಯಕರ್ತರಿಗೂ ತಿಳಿಸಿ ಹೇಳುತ್ತೇವೆ. ಸುಮಲತಾ ಅವರಿಗೂ ಪರಿಸ್ಥಿತಿ ವಿವರಿಸಿದ್ದೇವೆ ಎಂದು ಸ್ಪಷ್ಟವಾಗಿ ಶಿವಕುಮಾರ್ ಹೇಳಿದ್ದಾರೆ. 
ಸುಮಲತಾ ರಾಜಕೀಯಕ್ಕೆ ಬರುವುದಾದರೆ ಬರಲಿ. ಬೇರೆ ರೀತಿಯಲ್ಲಿ ಸಾಕಷ್ಟು ಅವಕಾಶಗಳಿದ್ದು, ನಾವೆಲ್ಲ ಅವರಿಗೆ ಸಹಕಾರ ಕೊಡುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!