ರಮೇಶ್ ಜಾರಕಿಹೊಳಿ 
ರಾಜಕೀಯ

ಇನ್ನೂ ಯಾರ ಕೈಗೂ ಸಿಗದ ರಮೇಶ್ ಜಾರಕಿಹೊಳಿ; ರಾಜಕೀಯ ಡ್ರಾಮಾಕ್ಕೆ ಇಂದು ಕ್ಲೈಮ್ಯಾಕ್ಸ್?

ಕಾಂಗ್ರೆಸ್ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ 15 ಬಂಡಾಯ ಕಾಂಗ್ರೆಸ್ ಶಾಸಕರ...

ಬೆಳಗಾವಿ: ಕಾಂಗ್ರೆಸ್ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ 15 ಬಂಡಾಯ ಕಾಂಗ್ರೆಸ್ ಶಾಸಕರ ಇತ್ತೀಚಿನ ರಾಜಕೀಯ ಚಟುವಟಿಕೆಗಳು ಮೈತ್ರಿ ಸರ್ಕಾರವನ್ನು ಮತ್ತೆ ಇಕ್ಕಟ್ಟಿಗೆ ಸಿಲುಕಿಸಿದೆ. ರಾಜಕೀಯ ನಾಟಕ ಇದೀಗ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಇಂದು ದೆಹಲಿಯಲ್ಲಿ ತಮ್ಮ ಸೋದರನನ್ನು ಜತೆಗೂಡಲಿದ್ದಾರೆ. ಮುಂದೆ ಏನು ನಡೆಯಲಿದೆ ಎಂಬ ಕುತೂಹಲ ಮನೆಮಾಡಿದೆ.

ಶಾಸಕ ಬಾಲಚಂದ್ರ ಕಾಂಗ್ರೆಸ್ ನ ಅತೃಪ್ತ ಶಾಸಕರ ಜೊತೆ ದೆಹಲಿಯಲ್ಲಿ ಸಂಪರ್ಕದಲ್ಲಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿಯ ಉನ್ನತ ಮಟ್ಟದ ನಾಯಕರು ಜಾರಕಿಹೊಳಿ ಸೋದರರೊಂದಿಗೆ ಮಾತುಕತೆ ನಡೆಸಿದ್ದು ಕೆಲವು ವಿಷಯಗಳಲ್ಲಿ ಇನ್ನೂ ಎರಡು ಕಡೆಯವರು ಅಂತಿಮ ತೀರ್ಮಾನಕ್ಕೆ ಬರಬೇಕಾಗಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ.

ಪಕ್ಷದ ಯಾವುದೇ ಶಾಸಕರು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿಲ್ಲ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಹೇಳುತ್ತಿದ್ದರೂ ಕೂಡ ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ ಕನಿಷ್ಠ 14 ಶಾಸಕರು ಕಾಂಗ್ರೆಸ್ ತೊರೆಯಲು ರಮೇಶ್ ಜಾರಕಿಹೊಳಿ ಅವರಿಗೆ ಮಾತು ಕೊಟ್ಟಿದ್ದಾರೆ ಎನ್ನಲಾಗುತ್ತಿದೆ.

ರಮೇಶ್ ಜಾರಕಿಹೊಳಿ ಜೊತೆ ಯಾವುದೇ ಮಾತುಕತೆ ನಡೆಸಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹೇಳುತ್ತಿದ್ದರೂ ಕೂಡ ಅವರು ದೆಹಲಿಗೆ ಏಕೆ ಹೋಗಿದ್ದರು ಎಂಬ ಸಂಶಯವನ್ನು ಕೆಲ ನಾಯಕರು ವ್ಯಕ್ತಪಡಿಸುತ್ತಿದ್ದಾರೆ.ಕಾಂಗ್ರೆಸ್ ಶಾಸಕರಿಗೆ ಬಿಜೆಪಿ  25ರಿಂದ 30 ಕೋಟಿ ರೂಪಾಯಿ ಹಣದ ಆಮಿಷವೊಡ್ಡಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯನವರ ಆರೋಪ ನಿಜ. ಶಾಸಕರಿಗೆ ಬೋನಸ್ ಕೂಡ ನೀಡಲಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು