ರಾಜಕೀಯ

ಲೋಕಸಭಾ ಚುನಾವಣೆ: ಬೆಂಗಳೂರು ಸೆಂಟ್ರಲ್ ನಿಂದ ಪಕ್ಷೇತರ ಅಭ್ಯರ್ಥಿಯಾಗಿ ನಟ ಪ್ರಕಾಶ್ ರೈ ಸ್ಪರ್ಧೆ

Nagaraja AB

ಬೆಂಗಳೂರು:  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ನಟ ಪ್ರಕಾಶ್ ರೈ  ಹೇಳಿದ್ದಾರೆ.

ಜನವರಿ 1 ರಂದು ಪಕ್ಷೇತರ ಅಭ್ಯರ್ಥಿಯಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಪ್ರಕಾಶ್ ರೈ ಟ್ವೀಟ್ ಮಾಡಿದ್ದರು.  ಆದರೆ, ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ಸುಳಿವು ಬಿಟ್ಟು ಕೊಟ್ಟಿರಲಿಲ್ಲ.

ಈ ಹಿನ್ನೆಲೆಯಲ್ಲಿ ಇಂದು ಟ್ವೀಟ್ ಮಾಡಿರುವ ಪ್ರಕಾಶ್ ರೈ, ನನ್ನ ಹೊಸ ಪಯಣಕ್ಕೆ ಬೆಂಬಲಿಸದ ಎಲ್ಲರಿಗೂ ಧನ್ಯವಾದಗಳು. ನಾನು ಕರ್ನಾಟಕದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ  ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುತ್ತಿರುವುದಾಗಿ ಹೇಳಿದ್ದಾರೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಬಳಿಕ ಎಡಪಂಥೀಯರಲ್ಲಿ ಗುರುತಿಸಿಕೊಂಡಿದ್ದ ಪ್ರಕಾಶ್ ರೈ, ಜಸ್ಟ್ ಆಸ್ಕಿಂಗ್ ಎಂಬ ಹ್ಯಾಷ್ ಟಾಗ್ ಬಳಸಿ ಕೇಂದ್ರಸರ್ಕಾರ, ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ.
2008ರಲ್ಲಿ ರಚನೆಯಾಗಿರುವ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಪಿ. ಸಿ. ಮೋಹನ್  ಹಾಲಿ ಸಂಸದರಾಗಿದ್ದಾರೆ. 2019ರ ಚುನಾವಣೆಯಲ್ಲೂ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
SCROLL FOR NEXT