ಪ್ರಕಾಶ್ ರೈ 
ರಾಜಕೀಯ

ಪ್ರಕಾಶ್ ರೈ ಪ್ರಬಲ ಸ್ಪರ್ಧಿ, ಅವರಿಗೆ ನಮ್ಮ ಬೆಂಬಲ: ಆಮ್ ಆದ್ಮಿ ಪಕ್ಷ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ನಟ ಪ್ರಕಾಶ್ ರೈ ಘೋಷಿಸಿದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷ ಪ್ರಕಾಶ್ ರೈ ಅವರಿಗೆ ಅಧಿಕೃತ ಬೆಂಬಲ ಘೋಷಿಸಿದೆ.

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ನಟ ಪ್ರಕಾಶ್ ರೈ ಘೋಷಿಸಿದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷ ಪ್ರಕಾಶ್ ರೈ ಅವರಿಗೆ ಅಧಿಕೃತ ಬೆಂಬಲ ಘೋಷಿಸಿದೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ  ದೆಹಲಿ, ಪಂಜಾಬ್, ಹರ್ಯಾಣ ಮತ್ತು ಗೋವಾ ಗಳಲ್ಲಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಕರ್ನಾಟಕ ಎಎಪಿ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದ್ದಾರೆ. ಆದರೆ ಬೆಂಗಳೂರಿನಂತ ಸಿಟಿಗಳಲ್ಲಿ ಆಯ್ದ ಅಭ್ಯರ್ಥಿಗಳಿಗೆ ಬೆಂಬಲ ನೀಡಲಾಗುತ್ತದೆ. ಉದಾಹರಣೆಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸುವ ಪ್ರಕಾಶ್ ರಾಜ್ ಅವರಿಗೆ ಬೆಂಬಲ ನೀಡುವುದಾಗಿ ತಿಳಿಸಿದ್ದಾರೆ.
ಕಳೆದ ಬಾರಿ ಬೆಂಗಳೂರು ದಕ್ಷಿಣದಿಂದ ಬಿಜೆಪಿ ಅನಂತ್ ಕುಮಾರ್  ಅವರ ವಿರುದ್ಧ ಕ್ಯಾಪ್ಟನ್ ಗೋಪಿನಾಥ್ ಸ್ಪರ್ಧಿಸಿದ್ದು, ಜಾತ್ಯಾತೀತ ಮತಗಳನ್ನು ವಿಭಜಿಸಿದ್ದರು, ಪ್ರಕಾಶ್ ರಾಜ್ ಪ್ರಬಲ ಅಭ್ಯರ್ಥಿ, ಅವರ ಸ್ಪರ್ಧೆಯಿಂದ ಮತಗಳು ವಿಭಜನೆಯಾಗುವುದಿಲ್ಲ, ಆದರೆ ಎಲ್ಲಾ ಧರ್ಮಗಳ ಮತಗಳನ್ನು ಒಗ್ಗೂಡಿಸುತ್ತವೆ ಎಂದು ಹೇಳಿದ್ದಾರೆ,
ಬೆಂಗಳೂರು ನಗರದಲ್ಲಿ 8 ವಿಧಾನಸಭೆ ಕ್ಷೇತ್ರಗಳಿದ್ದು, 5ರಲ್ಲಿ ಕಾಂಗ್ರೆಸ್ ಮತ್ತು ಮೂರು ಬಿಜೆಪಿ ಶಾಸಕರಿದ್ದಾರೆ, ಎಎಪಿಯ ಯಾವುದೇ ಶಾಸಕರು ಇಲ್ಲ, ಹೀಗಾಗಿ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸುವ ಪ್ರಕಾಶ್ ರೈ ಅವರಿಗೆ ಬೆಂಬಲ ವ್ಯಕ್ತ ಪಡಿಸುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT