ರಾಜಕೀಯ

ಬಿಜೆಪಿ ಜನರ ಆಶಯಗಳನ್ನು ಛಿದ್ರಗೊಳಿಸಿದೆ, ಸಂವಿಧಾನಾತ್ಮಕ ಸಂಸ್ಥೆಗಳನ್ನು ಲಘುವಾಗಿ ಪರಿಗಣಿಸಿದೆ: ಎಚ್.ಕೆ ಪಾಟೀಲ್

Shilpa D
ಬೆಂಗಳೂರು:  ಬಿಜೆಪಿ ಜನರ ಆಶಯಗಳನ್ನು ಛಿದ್ರಗೊಳಿಸಿ, ಸಂವಿಧಾನಾತ್ಮಕ ಸಂಸ್ಥೆಗಳನ್ನು ಲಘುವಾಗಿ ಪರಿಗಣಿಸಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ. ಪಾಟೀಲ್‌ ಲೇವಡಿ ಮಾಡಿದ್ದಾರೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಂಡು ಮುಂದಿನ ಲೋಕಸಭೆ ಚುನಾವಣೆಯಲ್ಲಿ  ಪಕ್ಷ ಉತ್ತಮ ಸಾಧನೆ ಮಾಡಲಿದೆ ಎಂದು ಹೇಳಿದ್ದಾರೆ.
ಎಚ್.ಕೆ ಪಾಟೀಲ್ ಅವರನ್ನು ಇತ್ತೀಚೆಗೆ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ, ಲೋಕಸಭೆ ಚುನಾವಣೆಗೆ ಜೆಡಿಎಸ್‌ ಜೊತೆಗೆ ಸ್ಥಾನ ಹೊಂದಾಣಿಕೆಯಲ್ಲಿ ಯಾವುದೇ ಗೊಂದಲ ಇಲ್ಲ. ಮಾತುಕತೆ ಸಂದರ್ಭದಲ್ಲಿ ಯಾರಿಗೂ ಬೇಸರವಾಗದಂತೆ ಸೀಟು ಹಂಚಿಕೆ ಮಾಡಿಕೊಳ್ಳುತ್ತೇವೆ ಎಂದರು.
2014 ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಜನ ಬೆಟ್ಟದಷ್ಟು ಆಸೆ, ನಿರೀಕ್ಷೆ ಹೊಂದಿದ್ದರು. ಆದರೆ ಜನರ ಎಲ್ಲಾ ಆಸೆಗಳು ಛಿದ್ರವಾಗಿದೆ, ಜನಪರವಾದ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ಸಿಬಿಐ ಸಂಸ್ಥೆಯನ್ನು ಸರ್ಕಾರ ನಡೆಸಿಕೊಳ್ಳುತ್ತಿರುವ ರೀತಿ  ಸರಿಯಲ್ಲ ಎಂದು ಹೇಳಿದ್ದಾರೆ. ಸಂವಿಧಾನಿಕ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಲಘುವಾಗಿ ಪರಿಗಣಿಸುತ್ತಿದೆ ಎಂದು ಹೇಳಿದ್ದಾರೆ.
SCROLL FOR NEXT