ದಿನೇಶ್ ಗುಂಡೂರಾವ್ 
ರಾಜಕೀಯ

ಮೈತ್ರಿ ಸರ್ಕಾರ ಇದ್ದಾಗ ನೋವು ತಪ್ಪಿದಲ್ಲ: ದಿನೇಶ್ ಗುಂಡೂರಾವ್

ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಸರ್ಕಾರದಲ್ಲಿನ ಕೆಲ ಸಮಸ್ಯೆಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಒಪ್ಪಿಕೊಂಡಿದ್ದಾರೆ

ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಸರ್ಕಾರದಲ್ಲಿನ ಕೆಲ ಸಮಸ್ಯೆಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಒಪ್ಪಿಕೊಂಡಿದ್ದಾರೆ.ಆದರೆ, ಭಿನ್ನಾಭಿಪ್ರಾಯಗಳು ಇತ್ಯರ್ಥಗೊಳ್ಳುವ ವಿಶ್ವಾಸವಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈತ್ರಿ ಸರ್ಕಾರ ಇದ್ದಾಗ ಯಾವಾಗಲೂ ಕೆಲ ಸಮಸ್ಯೆಗಳು ಇರುತ್ತವೆ. ಅವುಗಳನ್ನು ನಿಭಾಯಿಸುವ ಸಾಮರ್ಥ್ಯ ನಮ್ಮಲ್ಲಿದೆ. ಜೆಡಿಎಸ್ ಅಥವಾ ಕಾಂಗ್ರೆಸ್  ಬಹುಮತವಿಲ್ಲ ಎಂಬುದನ್ನು ನೆನಪಿನಲ್ಲಿಡಬೇಕು. ಸರ್ವಾಧಿಕಾರಿ ಸರ್ಕಾರವನ್ನು ಅಧಿಕಾರದಿಂದ ದೂರ ತಳ್ಳುವ ನಿಟ್ಟಿನಲ್ಲಿ ಮೈತ್ರಿ ಮಾಡಿಕೊಂಡಿದ್ದೇವೆ. ರಾಷ್ಟ್ರದ ಹಿತಾಸಕ್ತಿಯನ್ನು ಕಾಪಾಡುತ್ತಿದ್ದೇವೆ ಎಂದು ಸಂದರ್ಶನದಲ್ಲಿ ತಿಳಿಸಿದ್ದಾರೆ.

ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಆಚ್ಚರಿ ರೀತಿಯಲ್ಲಿ ಗೆಲುವು ಸಾಧಿಸಿದ್ದು, ಜೆಡಿಎಸ್ ಜೊತೆಗಿನ ಮೈತ್ರಿ ಉತ್ತಮವಾಗಿದ್ದರೂ ಕೆಲ ವಿಷಯಗಳನ್ನು ಸಾರ್ವಜನಿಕವಾಗಿ  ಹಂಚಿಕೊಳ್ಳಲು ಸಾಧ್ಯವಿಲ್ಲ. ಅದು ಉಭಯ ಪಕ್ಷಗಳಿಗೂ ಅನ್ವಯವಾಗುತ್ತದೆ. ಈ ಬಗ್ಗೆ ಉಭಯ ಪಕ್ಷಗಳ ನಾಯಕರು ಚರ್ಚಿಸಿದ್ದಾರೆ. ಹೆಚ್ ಡಿ ದೇವೇಗೌಡ ಮತ್ತು ಕುಮಾರಸ್ವಾಮಿ ಜೊತೆಗೆ ಚರ್ಚೆ ನಡೆಸಿದ್ದೀವಿ. ಸಾರ್ವಜನಿಕರ ನಿರಂತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಸ್ಪಷ್ಪಪಡಿಸಿದರು.

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಶಾಸಕ ಸುಧಾಕರ್ ನೇಮಕಕ್ಕೆ ಸರ್ಕಾರದಿಂದ ಅನುಮೋದನೆ ಸಿಕ್ಕಿಲ್ಲ. ಪಕ್ಷದಲ್ಲಿ ಶಿಸ್ತು ಮುಖ್ಯ. ಶಿಸ್ತು ಮೀರಿದರೆ ಸಹಿಸಲು ಸಾಧ್ಯವಿಲ್ಲ ಎಂದರು.  ರಮೇಶ್ ಜಾರಕಿಹೊಳಿ  ಕಾಂಗ್ರೆಸ್ ನಿಂದ ಐದು ಬಾರಿ ಗೆದ್ದು, ಸಚಿವರಾಗಿಯೂ ಅಧಿಕಾರ ಅನುಭವಿಸಿದ್ದಾರೆ. ಬೇರೆಯವರ ಮಾತು ಕೇಳದಂತೆ ಸಲಹೆ ನೀಡಲಾಗಿದೆ. ಅವರನ್ನು ಬಲಿಪಶು ಮಾಡಲು ಕೆಲವರು ಪ್ರಯತ್ನಿಸುತ್ತಿದ್ದಾರೆ ಎಂದರು.

ಸಂಕ್ರಾಂತಿ ನಂತರ ಲೋಕಸಭಾ ಚುನಾವಣೆ ಸೀಟು ಹೊಂದಾಣಿಕೆ ಕುರಿತಂತೆ ಜೆಡಿಎಸ್ ಜೊತೆಗೆ ಮಾತುಕತೆ ನಡೆಸಲಾಗುವುದು, 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲಾಗುವುದು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

ಕಾಂಗ್ರೆಸ್ ಮತಗಳು ಜೆಡಿಎಸ್ ಗೆ ಹೋಗಬಹುದು ಅಥವಾ ಜೆಡಿಎಸ್ ಮತಗಳು ಕಾಂಗ್ರೆಸ್ ಗೆ ಬರಬಹುದು. ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ ಇದು ಸಾಬೀತಾಗಿದೆ. ಜೆಡಿಎಸ್ ಅಭ್ಯರ್ಥಿಯಾಗಿದ್ದ ಮಧು ಬಂಗಾರಪ್ಪ ಕೇವಲ 52 ಸಾವಿರ ಮತಗಳ ಅಂತರದಿಂದ ಸೋತಿದ್ದರು ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT