ಅಂಬರೀಷ್. ಅಭಿಷೇಕ್ ಗೌಡ ಮತ್ತು ನಿಖಿಲ್ ಕುಮಾರ್ 
ರಾಜಕೀಯ

ಅಂಬಿ ಸ್ಮರಣೆಗೆ 'ದಳ' ಪತಿಗಳ ಗೈರು: ಜೆಡಿಎಸ್ ನಡೆಗೆ ಅಸಮಾಧಾನ; ಮಂಡ್ಯ ಕ್ಷೇತ್ರಕ್ಕೆ ನಿಖಿಲ್-ಅಭಿಷೇಕ್ ಪೈಪೋಟಿ!

ಮಂಡ್ಯದ ಎಲ್ಲಾ ಶಾಸಕರು, ಸಚಿವರು ಹಾಗೂ ಸಿಎಂ ಸೇರಿದಂತೆ ಹಲವು ಜೆಡಿಎಸ್ ಮುಖಂಡರು ಭಾಗವಹಿಸುತ್ತಾರೆ ಎಂದು ಹೇಳಲಾಗಿತ್ತು...

ಮಂಡ್ಯ: ಮಾಜಿ ಸಚಿವ ರೆಬೆಲ್ ಸ್ಟಾರ್  ದಿವಂಗತ ಅಂಬರೀಷ್ ಅವರ ಪುಣ್ಯಸ್ಮರಣೆ ಹಾಗೂ ಶ್ರದ್ದಾಂಜಲಿ ಕಾರ್ಯಕ್ರಮವನ್ನು ಶನಿವಾರ ಮಂಡ್ಯದಲ್ಲಿ  ಆಯೋಜಿಸಲಾಗಿತ್ತು.
ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘ ಹಮ್ಮಿಕೊಂಡಿದ್ದ ಅಂಬಿ ನುಡಿ ನಮನ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಹಾಜರಾಗಿದ್ದರು. ಆದರೆ ಮುಖ್ಯಮಂತ್ರಿ ಕುಮಾರಸ್ವಾಮಿ, ಹಾಗೂ ದೇವೇಗೌಡರು ಗೈರಾಗಿದ್ದರು.
ಮಂಡ್ಯದ ಎಲ್ಲಾ ಶಾಸಕರು, ಸಚಿವರು ಹಾಗೂ ಸಿಎಂ ಸೇರಿದಂತೆ ಹಲವು ಜೆಡಿಎಸ್ ಮುಖಂಡರು ಭಾಗವಹಿಸುತ್ತಾರೆ ಎಂದು ಹೇಳಲಾಗಿತ್ತು, ಆದರೆ ಯಾರೋಬ್ಬರು ಬಾರದಿರುವುದು ಮಂಡ್ಯ ಜನರ ಆಕ್ರೋಶಕ್ಕೆ ಕಾರಣವಾಗಿದೆ,
ಅಂಬರೀಷ್ ನಿಧನರಾದ ವೇಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಯಲ್ಲಿ  ಭಾಗಿಯಾಗಿದ್ದ ಕುಮಾರ ಸ್ವಾಮಿ ಅಂಬಿ ತವರು ಕ್ಷೇತ್ರದಲ್ಲಿ  ನಡೆದ ಕಾರ್ಯಕ್ರಮದಲ್ಲಿ ಗೈರಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಎಚ್ಡಿಕೆ  ಗೈರಿನ ಹಿನ್ನೆಲೆಯಲ್ಲಿ ರಾಜಕೀಯ ಲೆಕ್ಕಾಚಾರ ಇದೆ ಎಂದು ಹೇಳಲಾಗುತ್ತಿದೆ. ಅಂಬರೀಷ್ ನಿಧನದ ನಂತರ, ತೆರವಾಗಿರುವ ಮಂಡ್ಯ ಕ್ಷೇತ್ರಕ್ಕೆ ಈಗಾಗಲೇ ಪೈಪೋಟಿ ಆರಂಭವಾಗಿದೆಸ ಅಭಿಷೇಕ್ ಅವರು ರಾಜಕೀಯಕ್ಕೆ ಬರಬೇಕು , ಅವರ ಬೆನ್ನಿಗೆ ನಾವಿದ್ದೇವೆ ಎಂದು ಇಲ್ಲಿನ ಜನ ಈಗಾಗಲೇ ಬೆಂಬಲ ಘೋಷಿಸಿದ್ದಾರೆ, ಅಭಿಷೇಕ್ ಗೆ ಮಂಡ್ಯ ಜನತೆ ತೋರುತ್ತಿರುವ ಪ್ರೀತಿ ಜೆಡಿಎಸ್ ನಾಯಕರಲ್ಲಿ ಕಂಪು ಮೂಡಿಸಿದೆ ಎಂದು ಹೇಳಲಾಗುತ್ತಿದೆ.
ಒಂದು ವೇಳೆ ಅಭಿಷೇಕ್ ರಾಜಕೀಯ ಆಯ್ಕೆ ಮಾಡಿಕೊಂಡರೇ ಜೆಡಿಎಸ್ ಗೆ ಪೆಟ್ಟು ಬೀಳಲಿದೆ ಎಂದು ಹೇಳಲಾಗುತ್ತಿದೆ, ಈಗಾಗಲೇ ಮಂಡ್ಯ ಕ್ಷೇತ್ರದಿಂದ ನಿಖಿಲ್ ಕುಮಾರ್ ಸ್ವಾಮಿ ಅವರನ್ನು ಕಣಕ್ಕಿಳಿಸಬೇಕೆಂದು ಜೆಡಿಎಸ್ ಸಿದ್ಥತೆ ನಡೆಸಲಾಗುತ್ತಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಅಥವಾ ಅಭಿಷೇಕ್‍ಗೌಡ ಇಬ್ಬರಲ್ಲಿ ಯಾರು ಸ್ಪರ್ಧಿಸುತ್ತಾರೆ ಎಂಬ ಬಿರುಸಿನ ಚರ್ಚೆ ಶುರುವಾಗಿದೆ. ಮಂಡ್ಯ ಉತ್ತರಾಧಿಕಾರಿ ಯಾರಾಗಲಿದ್ದಾರೆ ಎಂಬುದನ್ನು ಕಾದು ನೋಡಬೇಕಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ

SCROLL FOR NEXT