ಸಂಗ್ರಹ ಚಿತ್ರ 
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ಪರ್ಧೆ ವಿಚಾರ, ಒಗ್ಗೂಡಿದ ಸ್ಯಾಂಡಲ್ ವುಡ್ ನಿಂದ ಹೈಲೆವೆಲ್ ಮೀಟಿಂಗ್!

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಸುಮಲತಾ ಅವರ ಬೆಂಬಲಕ್ಕೆ ಇಡೀ ಸ್ಯಾಂಡಲ್ ವುಡ್ ನಿಂತಿದೆ ಎಂಬ ವಾದ ಕೂಡ ಕೇಳಿಬರುತ್ತಿದೆ.

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಷ್ ಅವರು ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ವಿಚಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಇತ್ತ ಸುಮಲತಾ ಅವರ ಬೆಂಬಲಕ್ಕೆ ಇಡೀ ಸ್ಯಾಂಡಲ್ ವುಡ್ ನಿಂತಿದೆ ಎಂಬ ವಾದ ಕೂಡ ಕೇಳಿಬರುತ್ತಿದೆ.
ಇತ್ತೀಚೆಗೆ ಮಂಡ್ಯದ ಸರ್‌ಎಂವಿ ಕ್ರೀಡಾಂಗಣದಲ್ಲಿ ಅಖಿಲ ಕರ್ನಾಟಕ ಅಂಬರೀಷ್‌ ಅಭಿಮಾನಿಗಳ ಸಂಘ ಆಯೋಜಿಸಿದ್ದ ಅಂಬರೀಷ್‌ ಪುಣ್ಯಸ್ಮರಣೆ, ಶ್ರದ್ಧಾಂಜಲಿ ಮತ್ತು ನುಡಿನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸ್ಯಾಂಡಲ್ ವುಡ್ ನ ದಿಗ್ಗಜ ಗಣ್ಯರು ಈ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಮಾಧ್ಯಮವೊಂದರ ವರದಿ ಅನ್ವಯ ಅಂಬರೀಷ್ ಪುಣ್ಯ ಸ್ಮರಣೆ ಕಾರ್ಯಕ್ರಮದ ಬಳಿಕ ಸಭೆ ಸೇರಿದ್ದ ಸ್ಯಾಂಡಲ್ ವುಡ್ ಗಣ್ಯರು, ಒಂದು ವೇಳೆ ಮಂಡ್ಯದಿಂದ ಸುಮಲತಾ ಅವರು ಸ್ಪರ್ಧಿಸಿದ್ದೇ ಆದರೆ ನಾವೆಲ್ಲರೂ ಒಗ್ಗೂಡಿ ಅವರ ಗೆಲುವಿಗೆ ಶ್ರಮಿಸೋಣ ಎಂಬ ಒಕ್ಕೋರಲಿನ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.
ಸ್ಯಾಂಡಲ್ ವುಡ್ ಹಲವು ನಟ ನಟಿಯರು ಬೇರೆ ಬೇರೆ ಪಕ್ಷಗಳಲ್ಲಿ ಇದ್ದರೂ ಮಂಡ್ಯ ಮತ್ತು ಸುಮಲತಾ ಅಂಬರೀಶ್ ಅವರ ವಿಚಾರಕ್ಕೆ ಸಂಬಂಧಿಸಿದಂತೆ ಒಗ್ಗೂಡಿದ್ದು, ಪಕ್ಷ ಬೇದ ಮರೆತು ಸುಮಲತಾ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?