ನವದೆಹಲಿ: ರಾಜ್ಯ ರಾಜಕೀಯ ವಿದ್ಯಮಾನಗಳು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿವೆ, ಕರ್ನಾಟಕದಲ್ಲಿ ಅಸ್ಥಿತ್ವದಲ್ಲಿರುವ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅಡಿ ಮುಂಬರುವ ಲೋಕಸಭೆ ಚುನಾವಣೆ ಎದುರಿಸಲು ಕೇಂದ್ರದ ಬಿಜೆಪಿ ನಾಯಕರಿಗೆ ಸುತರಾಂ ಇಷ್ಟ ಇಲ್ಲ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಗಳು ರಾಜ್ಯದ ಆಡಳಿತ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳುತ್ತವೆ ಎಂಬ ಭಯ ಬಿಜೆಪಿಗೆ ಕಾಡುತ್ತಿದೆ,ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚಿಸಲು ಯತ್ನಿಸುತ್ತಿಲ್ಲ, ಬದಲಿಗೆ ಸರ್ಕಾರ ಉರುಳಿಸಲು ಮಾತ್ರ ಬಿಜೆಪಿ ಸಿದ್ಧವಾಗಿದೆ, ಹೀಗಾಗಿ ಶಾಸಕರನ್ನು ದೂರ ಕರೆದೊಯ್ದಿದೆ.
ಸದ್ಯ ಅಸ್ಥಿತ್ವದಲ್ಲಿರುವ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸುವುದಷ್ಟೇ ಬಿಜೆಪಿ ಗುರಿ ಎಂದು ಬಿಜೆಪಿ ಸದಸ್ಯರೊಬ್ಬರು ತಿಳಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿಗೆ ಎಲ್ಲಾ ಸಮೂಹದ ಜನರ ಪ್ರಬಲ ಬೆಂಬಲವಿಲ್ಲ, ಹೀಗಾಗಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ದೋಸ್ತಿ ಪಕ್ಷಗಳು ಸರ್ಕಾರಿ ಯಂತ್ರ ದುರುಪಯೋಗ ಪಡಿಸಿಕೊಳ್ಳುತ್ತವೆ ಎಂದು ನಂಬಿರುವ ಬಿಜೆಪಿ ರಾಜ್ಯ ಸರ್ಕಾರಕ್ಕೆ ಕೌಂಟರ್ ಕೊಡಲು ಮುಂದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics