ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಶಾಸಕರನ್ನು ಹೋಟೆಲ್ ನಲ್ಲಿ​ ಕೂಡಿಹಾಕಿ ಕಾಯುವ 'ಚೌಕಿದಾರ' ಮೋದಿ: ಸಿದ್ದರಾಮಯ್ಯ

ಸಂಕ್ರಾಂತಿ ಹಬ್ಬದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಕಮಲದ ಚಟುವಟಿಕೆ ತೀವ್ರ ಗೊಂಡಿದ್ದು, ಕಾಂಗ್ರೆಸ್ ಶಾಸಕರ ಸೆಳೆಯುವ ಬಿಜೆಪಿ ನಾಯಕ ನಡೆಯನ್ನು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷರೂ ಕೂಡ ಆಗಿರುವ ಸಿದ್ದರಾಮಯ್ಯ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಂಗ್ರಹ ಚಿತ್ರ
Srinivasa Murthy VN
Updated On : 16 Jan 2019, 11:50 am
ಬೆಂಗಳೂರು: ಸಂಕ್ರಾಂತಿ ಹಬ್ಬದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಕಮಲದ ಚಟುವಟಿಕೆ ತೀವ್ರ ಗೊಂಡಿದ್ದು, ಕಾಂಗ್ರೆಸ್ ಶಾಸಕರ ಸೆಳೆಯುವ ಬಿಜೆಪಿ ನಾಯಕ ನಡೆಯನ್ನು ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷರೂ ಕೂಡ ಆಗಿರುವ ಸಿದ್ದರಾಮಯ್ಯ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, 'ಆಪರೇಷನ್​ ಕಮಲ ಮಾಡುವುದು ಬಿಜೆಪಿಗೆ ಹೊಸತೇನಲ್ಲ. ಬಿಜೆಪಿಯವರು ಮೊದಲಿನಿಂದಲೂ ಈ ಪ್ರಯತ್ನ ಮಾಡಿಕೊಂಡು ಬಂದಿದ್ದಾರೆ. ಸರ್ಕಾರವನ್ನು ಕೆಡವಲು ಪ್ರಯತ್ನಿಸುತ್ತಲೇ ಇದ್ದಾರೆ. ಅವರು ಏನೇ ಮಾಡಿದರೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ. ಅಲ್ಲದೆ "ಗಂಧಾ ನೀಯತ್​, ರೆಸಾರ್ಟ್​ ವಿಕಾಸ್​," ಎಂದು ಕಿಡಿಕಾರಿದ್ದಾರೆ.
ಅಂತೆಯೇ 'ರಾಜ್ಯ ಸರ್ಕಾರ ಸುಭದ್ರವಾಗಿದೆ. 2-3 ಶಾಸಕರಷ್ಟೇ ಮುಂಬೈಗೆ ಹೋಗಿದ್ದಾರೆ. ಉಳಿದಿದ್ದೆಲ್ಲ ಕೇವಲ ಊಹಾಪೋಹ. ಬಿಜೆಪಿಯವರು ಶಿವಳ್ಳಿ ಸೇರಿ ಹಲವರಿಗೆ ಗಾಳ ಹಾಕಿದ್ದಾರೆ. ಜೊತೆಗೆ ದೊಡ್ಡ ಮಟ್ಟದ ಹಣದ ಆಮಿಷವೊಡ್ಡಿದ್ದಾರೆ. ಹೀಗೆಲ್ಲ ಮಾಡಿದರೆ ಸರ್ಕಾರ ಉರುಳುತ್ತದೆ, ಅಧಿಕಾರ ಸಿಗುತ್ತದೆ ಎಂದು ಬಿಜೆಪಿ ಭಾವಿಸಿದೆ. ಆದರೆ, ಅದು ತಪ್ಪು ಕಲ್ಪನೆ. ಬಿಜೆಪಿ ಅಸಹಾಯಕ ಸ್ಥಿತಿ ತಲುಪಿದಾಗೆಲ್ಲ ರೆಸಾರ್ಟ್​ ರಾಜಕಾರಣಕ್ಕೆ ಮತ್ತು ಆಪರೇಷನ್​ ಕಮಲಕ್ಕೆ ಮೊರೆ ಹೋಗುತ್ತದೆ. ಇದೇನು ಹೊಸತಲ್ಲ, ಆದರೆ ಬಿಜೆಪಿಯ ಪ್ರಯತ್ನ ಮತ್ತೆ ವಿಫಲವಾಗಲಿದೆ ಎಂದು ಟೀಕಿಸಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments