ಸಿದ್ದರಾಮಯ್ಯ 
ರಾಜಕೀಯ

ಬಿಜೆಪಿ ಪ್ರಯತ್ನ ಎಂದಿಗೂ ಫಲಿಸದು, 'ಆಪರೇಷನ್ ಕಮಲ' ವಿಫಲ ಯತ್ನ: ಸಿದ್ದರಾಮಯ್ಯ

ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್ ಯಡಿಯೂರಪ್ಪ ಅವರು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ,...

ಹುಬ್ಬಳ್ಳಿ: ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್ ಯಡಿಯೂರಪ್ಪ ಅವರು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ, ತಿಪ್ಪರಲಾಗ ಹಾಕಿದಲೂ ಅವರ ಪ್ರಯತ್ನ ಈಡೇರದು ಎಂದು ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಎಲ್ಲಾ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಬಿಜೆಪಿಗೆ ಯಾವ ಶಾಸಕರು ಹೋಗುವುದಿಲ್ಲ ಎಂದು ಗೊತ್ತಿದ್ದರೂ ಅವರೆಲ್ಲಾ ವಿಫಲ ಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಆಪರೇಷನ್ ಕಮಲ ಎಂಬ ರೋಗವನ್ನು ತಂದಿಟ್ಟವರು ಬಿಜೆಪಿಯವರು, ಯಾರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲವೋ ಅವರು ಇಂಥಹ ಕೆಲಸಗಳಿಗೆ ಕೈ ಹಾಕುತ್ತಾರೆ.
ಇನ್ನೂ ಈಗ ಇರುವ ಯಾವುದೇ ಹಾಲಿ ಸಚಿವರು ತಮ್ಮ ಹುದ್ದೆಯಿಂದ ಕೆಳಗಿಳಿಯುವುದಿಲ್ಲ ಹಾಗೂ ಯಾವುದೇ ಶಾಸಕರಿಗೂ ಯಾವುದೇ ಹುದ್ದೆಯ ಭರವಸೆ ಕೂಡ ನೀಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ ಸಿದ್ದರಾಮಯ್ಯ ಜನವರಿ 18 ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು ಎಲ್ಲಾ ಶಾಸಕರು ಹಾಜರಾಗಲಿದ್ದಾರೆ ಎಂಬ ಸ್ಪಷ್ಟಪಡಿಸಿದ್ದಾರೆ..

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?