ಯಡಿಯೂರಪ್ಪ 
ರಾಜಕೀಯ

ನಾವು 'ಆಪರೇಷನ್' ಮಾಡಿಲ್ಲ, ಅವರೇ ನಮಗೆ 'ಆಪರೇಷನ್' ಮಾಡಲು ಯತ್ನಿಸುತ್ತಿದ್ದಾರೆ: ಯಡಿಯೂರಪ್ಪ

ನಾವು ಆಪರೇಷನ್ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು: ನಾವು ಆಪರೇಷನ್ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 
ನಾವು ಶಾಸಕರನ್ನು ಸೆಳೆಯುತ್ತಿಲ್ಲ, ಕುದುರೆ ವ್ಯಾಪಾರದಲ್ಲಿ ತೊಡಗಿರುವುದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಅವರೇ ಹಣದ, ಮಂತ್ರಿ ಸ್ಥಾನದ ಆಮಿಷವೊಡ್ಡಿ  ನಮ್ಮ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸಿದ್ದಾರೆ. 
"ಬಿಜೆಪಿ ಶಾಸಕರು ಲೋಕಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಸಲುವಾಗಿ ಒಂದೆಡೆ ಸೇರಿದ್ದರು. ಬಿಜೆಪಿ ಶಾಸಕರು ಒಟ್ಟಿಗೆ ಸೇರಿದ್ದರಿಂದ ಜೆಡಿಎಸ್-ಕಾಂಗ್ರೆಸ್ ನಾಯಕರೇಕೆ  ಚಿಂತೆಗೊಳಗಾದರು ಎಂಬುದು ನನಗೆ ಅರ್ಥವಾಗುತ್ತಿಲ್ಲ". 
ಬಿಜೆಪಿ ಶಾಸಕರು ಒಂದೆಡೆ ಸೇರಿದರೆ ಕಾಂಗ್ರೆಸ್-ಜೆಡಿಎಸ್ ಗೆ ಏಕೆಭಯ ಎಂದು ಪ್ರಶ್ನಿಸಿರುವ ಯಡಿಯೂರಪ್ಪ ನಮ್ಮ ವಿರುದ್ಧ ಶಾಸಕರನ್ನು ಸೆಳೆಯುತ್ತಿರುವ ಆರೋಪ ಮಾಡುವ ಬದಲು ಅವರ ಶಾಸಕರನ್ನು ಹಿಡಿದಿಟ್ಟುಕೊಳ್ಳಲಿ, ಅವರ ಶಾಸಕರು ಅತೃಪ್ತರಾದರೆ ಅವರನ್ನು ಒಗ್ಗೂಡಿಸುವುದು ನನ್ನ ಜವಾಬ್ದಾರಿಯಲ್ಲ ಎಂದು ಯಡಿಯೂರಪ್ಪ ಸಮ್ಮಿಶ್ರ ಸರ್ಕಾರದ ಆರೋಪಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ