ಕುಮಾರಸ್ವಾಮಿ 
ರಾಜಕೀಯ

ತನ್ನ ಶಾಸಕರ ಮೇಲೆ ಬಿಜೆಪಿಗೆ ನಂಬಿಕೆಯಿಲ್ಲ: ಕುಮಾರಸ್ವಾಮಿ ಟಾಂಗ್

ನಾನು ನನ್ನ ಕುಟುಂಬದ ಜೊತೆ ಹೊಸ ವರ್ಷ ಆಚರಣೆಗಾಗಿ ಮೂರು ದಿನ ಹೊರ ದೇಶಕ್ಕೆ ಹೋಗಿದ್ದಾಗ ಬಿಜೆಪಿಯವರು ದೊಡ್ಡ ಪ್ರಕರಣ ಮಾಡಿದ್ದರು...

ಬೆಂಗಳೂರು: ನಾನು ನನ್ನ ಕುಟುಂಬದ ಜೊತೆ ಹೊಸ ವರ್ಷ ಆಚರಣೆಗಾಗಿ ಮೂರು ದಿನ ಹೊರ ದೇಶಕ್ಕೆ ಹೋಗಿದ್ದಾಗ ಬಿಜೆಪಿಯವರು ದೊಡ್ಡ ಪ್ರಕರಣ ಮಾಡಿದ್ದರು. ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ಸಿಎಂ ವಿದೇಶ ಪ್ರವಾಸಕ್ಕೆ ತೆರಳಿದ್ದರು ಎಂದು ದೂರಿದ್ದರು. ಆದರೆ ಈಗ ಬಿಜೆಪಿಯವರು ಮಾಡುತ್ತಿರುವುದು ಏನು ಎಂದು ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಕಳೆದ ಆರು ದಿನಗಳಿಂದ ಬಿಜೆಪಿ ಶಾಸಕರು ಗುರುಗ್ರಾಮದಲ್ಲಿ ಏನು ಮಾಡುತ್ತಿದ್ದಾರೆ, ಆ ಶಾಸಕರ ಕ್ಷೇತ್ರದಲ್ಲಿ  ಬರ ಪರಿಸ್ಥಿತಿ ಇದ್ದರೂ ಅಲಿಲ ಹೋಗಿ ಏನು ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪನವರನ್ನು ಸಿಎಂ ಪ್ರಶ್ನಿಸಿದ್ದಾರೆ.
ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ ಪಡುತ್ತಲೇ ಇದೆ.ಜೆಡಿಎಸ್ ನಮ್ಮ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂಬ ಹೇಳಿಕೆ ಕೇಳಿ ನನಗೆ ಅಚ್ಚರಿಯಾಗಿದೆ, ಅವರ ಶಾಸಕರ ಮೇಲೆ ಅವರಿಗೆ ನಂಬಿಕೆಯಿಲ್ಲ, 
ರೆಸಾರ್ಟ್ ನಲ್ಲಿ ತಂಗಿರುವ ಶಾಸಕರ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿದ್ದಾರೆ, ಶಾಸಕರನ್ನು ಏಕೆ  ಹೋಟೆಲ್ ನಲ್ಲಿ ಲಾಕ್ ಮಾಡಲಾಗಿದೆ, ನಮ್ಮ ಶಾಸಕರಿಗೆ ನಾವು ಯಾವತ್ತೂ ಆ ರೀತಿ ಮಾಡಿಲ್ಲ ಎಂದು ಸಿಎಂ ವ್ಯಂಗ್ಯವಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT