ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಭ್ರಷ್ಟಾಚಾರ ವಿರುದ್ಧ ಮಾತನಾಡುವ ಮೋದಿ ಶಾಸಕರ ಖರೀದಿಗೆ ಹಣ ಎಲ್ಲಿಂದ ತರುತ್ತಾರೆ: ಕುಮಾರಸ್ವಾಮಿ

ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸುತ್ತೇನೆ ಎಂದು ಒಂದೆಡೆ ಪ್ರಧಾನಿ ಮೋದಿ ಹೇಳುತ್ತಾರೆ, ಆದರೆ ಮತ್ತೊಂದೆಡೆ ಅವರ ಪಕ್ಷದ ಮುಖಂಡರು ರಾಜ್ಯ ಕಾಂಗ್ರೆಸ್ ...

ಕೊಲ್ಕೋತಾ: ಭ್ರಷ್ಟಾಚಾರ ವಿರುದ್ಧ ಹೋರಾಟ ನಡೆಸುತ್ತೇನೆ  ಎಂದು ಒಂದೆಡೆ ಪ್ರಧಾನಿ ಮೋದಿ ಹೇಳುತ್ತಾರೆ, ಆದರೆ ಮತ್ತೊಂದೆಡೆ ಅವರ ಪಕ್ಷದ ಮುಖಂಡರು ರಾಜ್ಯ ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಮುಂದಾಗಿದ್ದಾರೆ, ಇದಕ್ಕೆ ಹಣ ಎಲ್ಲಿಂದ ತರುತ್ತಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಕಳೆದ ಒಂದು ವಾರದಿಂದ ಎಲ್ಲಾ ಬೆಳವಣಿಗೆಗಳನ್ನು ನೀವು ನೋಡುತ್ತಿದ್ದೀರಿ,  ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಯತ್ನಿಸುತ್ತಿದೆ, ನಾನು ಪ್ರಧಾನ ಮಂತ್ರಿಗಳಿಗೆ ಒಂದು ಪ್ರಶ್ನೆ ಕೇಳಲು ಬಯಸುತ್ತೇನೆ ಇತ್ತೀಚೆಗೆ ಪ್ರಧಾನ ಮಂತ್ರಿಗಳು ದೇಶವನ್ನು ಸ್ವಚ್ಛಗೊಳಿಸಲು ಹಾಗೂ ಭ್ರಷ್ಚಾಚಾರ ನಿರ್ಮೂಲನೆ ಮಾಡಲು ದೇಶದ ಜನತೆ ಸಹಕರಿಸಬೇಕು ಎಂದು ಕೇಳಿದ್ದರು, 
ಆದರೆ ಕರ್ನಾಟಕದಲ್ಲಿ ಏನಾಗುತ್ತಿದೆ, ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಎಲ್ಲಿಂದ ಹಣ ಬಂತು, ಅವರಿಗೆ ಬೆಂಬಲ ನೀಡುತ್ತಿರುವವರು ಯಾರು? ಅವರಿಗೆ ಹಣ ಎಲ್ಲಿಂಜದ ಬಂತು? ಎಂದು ಕುಮಾರ ಸ್ವಾಮಿ ಪ್ರಶ್ನಿಸಿದ್ದಾರೆ,
ಇನ್ನೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಶಾಸಕರು ಗೈರಿನ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಏನು ತೊಂದರೆಯಿಲ್ಲ,  ಅವರು ನಮ್ಮ ಜೊತೆಗೆ ಇರುತ್ತಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Ayodhya: ರಾಮ ಮಂದಿರ ದೇಣಿಗೆ ಲೂಟಿ ಪ್ರಕರಣ: 8 ಆರೋಪಿಗಳ ವಿರುದ್ಧ FIR ದಾಖಲು!

Women T-20 World cup: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಭರ್ಜರಿ ಗೆಲುವು!

ಸೇಡಿಗಾಗಿ ಖಾಸಗಿ ಪೋಟೋ, ವಿಡಿಯೋ ವೈರಲ್, ಬೆದರಿಕೆ ಪ್ರಕರಣ: ಕಡ್ಡಾಯವಾಗಿ FIR ದಾಖಲಿಸಬೇಕು, ಪೊಲೀಸರಿಗೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ!

Bidadi Township Project: ಸಿಎಂ ಡಿಕೆ ಶಿವಕುಮಾರ್‌ಗೆ 2ನೇ ಪತ್ರ ಬರೆದ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ!

ಗರಿಷ್ಠ ಅವಧಿ ಸಂಪೂರ್ಣ: KSCA ಕಾರ್ಯದರ್ಶಿ ಸಂತೋಷ್ ಮೆನನ್ ಅನರ್ಹ, BCCI ಒಂಬುಡ್ಸ್‌ಮನ್ ಆದೇಶ!