ಬಿ.ಎಸ್ ಯಡಿಯೂರಪ್ಪ 
ರಾಜಕೀಯ

ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಲ್ಲಿ ಜ್ವಾಲಾಮುಖಿ ಸ್ಪೋಟಗೊಳ್ಳಲು ಕಾಯುತ್ತಿದೆ: ಯಡಿಯೂರಪ್ಪ

ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಂಬರುವ ದಿನಗಳಲ್ಲಿ ಜ್ವಾಲಾಮುಖಿ ಸ್ಫೋಟಗೊಳ್ಳಲು ಕಾಯುತ್ತಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ,...

ಬೆಂಗಳೂರು: ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಂಬರುವ ದಿನಗಳಲ್ಲಿ ಜ್ವಾಲಾಮುಖಿ ಸ್ಫೋಟಗೊಳ್ಳಲು ಕಾಯುತ್ತಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ,
ಸಿಎಲ್ ಪಿ ಸಭೆಗೆ ಶಾಸಕರ ಗೈರು ಸಂಬಂಧ ಪ್ರತಿಕ್ರಿಯಿಸಿದ ಯಡಿಯೂರಪ್ಪ, ತಮ್ಮ ಬಲ ಪ್ರದರ್ಶಿಸಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿತ್ತು, ಸಭೆಗೆ ನಾಲ್ವರು ಅಸಮಾಧಾನಿತ ಶಾಸಕರು ಗೈರಾಗಿದ್ದರು,  ಶಾಸಕರು ಗೈರಿನಿಂದ ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬದು ತಿಳಿಯುತ್ತದೆ.
 ಈ ಭಿನ್ನಾಬಿಪ್ರಾಯಗಳೇ ಮುಂದಿನ ದಿನಗಳಲ್ಲಿ ದೊಟ್ಟ ಮಟ್ಟದ ಜ್ವಾಲಾಮುಖಿಯಾಗಿ ಸ್ಪೋಟಗೊಳ್ಳಲು ಕಾಯುತ್ತಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಶಾಸಕರ ಗೈರು ಕಾಂಗ್ರೆಸ್ ಒಳಗಿನ ಆಂತರಿಕ ಭಿನ್ನಮತ ಮತ್ತು ಅಸಮಾಧಾನವನ್ನು ತೋರಿಸುತ್ತದೆ ಎಂದ ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಪಕ್ಷದ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ, ಅದು ಅವರ ಹತಾಶೆ ಮತ್ತು ಭಯವನ್ನು ತೋರಿಸುತ್ತದೆ, ಶಾಸಕರ ಜೊತೆ ನಿಮ್ಮ ಬಾಂಧವ್ಯ ಹಾಗೂ ಸಂಬಂಧ ಗಟ್ಟಿಯಾಗಿದ್ದು ಚೆನ್ನಾಗಿದಿದ್ದರೇ ಏಕೆ ನೀವು ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಬೇಕಿತ್ತು ಎಂದು ಪ್ರಶ್ನಿಸಿದ್ದಾರೆ,
2008 ರಿಂದ ಬಿಜೆಪಿಯಿಂದ ಆಪರೇಷನ್ ಕಮಲ ಸಂಸ್ಕೃತಿ ಆರಂಭವಾಯಿತು ಎಂಬ ಕೆ,ಸಿ ವೇಣುಗೋಪಾಲ್ ಆರೋಪಕ್ಕೆ ಪ್ರತಿಕ್ರಿಯಿಸಿರುವ ಯಡಿಯೂರಪ್ಪ ಕಾಂಗ್ರೆಸ್ ನದ್ದು ಗಯಾ ರಾಮ್ ಸಂಸ್ಕೃತಿ ಎಂದು ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್