ಡಾ ಜಿ ಪರಮೇಶ್ವರ್ 
ರಾಜಕೀಯ

'ಕೈ ಶಾಸಕರ' ಗಲಾಟೆ ಪ್ರಕರಣ; ನಂಗೇನೂ ಗೊತ್ತಿಲ್ಲ ಎಂದ ಡಿಸಿಎಂ ಪರಮೇಶ್ವರ್!

ಬಳ್ಳಾರಿಯ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ...

ಬೆಂಗಳೂರು: ಬಳ್ಳಾರಿಯ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮಾಧ್ಯಮಗಳಿಂದಲೇ ಗೊತ್ತಾಯಿತು. ನಮ್ಮ ನಾಯಕರ್ಯಾರೂ ಸಂಪರ್ಕಕ್ಕೆ ಸಿಗಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.

ನಗರದ ಹೊರವಲಯದ ಬಿಡದಿ ಸಮೀಪ ಈಗಲ್ಟನ್ ರೆಸಾರ್ಟ್ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು, ಶಾಸಕರ ಮಧ್ಯೆ ಗಲಾಟೆ ನಡೆದಿರುವ ಬಗ್ಗೆ ಈಗ ತಾನೇ ಮಾಧ್ಯಮಗಳಿಂದ ತಿಳಿದುಕೊಂಡೆ. ನಿನ್ನೆ ರಾತ್ರಿ 8 ಗಂಟೆಯವರೆಗೆ ನಾನು ಕೂಡ ರೆಸಾರ್ಟ್ ನಲ್ಲಿಯೇ ಇದ್ದೆ. ನನ್ನ ಬೇರೆ ಕಾರ್ಯಕ್ರಮವಿದೆ ಎಂದು ಹೊರಹೋಗಿದ್ದೆ. ರಾತ್ರಿ 8 ಗಂಟೆಯಿಂದ ಬೆಳಗ್ಗೆಯವರೆಗೆ ಏನು ನಡೆಯಿತು ಎಂದು ನನಗೆ ಗೊತ್ತಿಲ್ಲ. ಇದೀಗ ಒಳಗೆ ಹೋಗಿ ಮಾಹಿತಿ ಪಡೆದು ನಿಮಗೆ ತಿಳಿಸುತ್ತೇನೆ ಎಂದರು.

ಮಾಧ್ಯಮಗಳಲ್ಲಿ ಸುದ್ದಿ ಬರುತ್ತಿದ್ದಂತೆ ಬೇರೆ ಶಾಸಕರನ್ನು ಸಂಪರ್ಕಿಸಿ ವಿಚಾರಿಸಿದಾಗ ಅವರು ಅಂತಹ ಘಟನೆಗಳು ಏನೂ ನಡೆದಿಲ್ಲ ಎಂದರು. ಇನ್ನು ಸಚಿವ ಡಿ ಕೆ ಶಿವಕುಮಾರ್ ಅವರನ್ನು ಸಂಪರ್ಕಿಸಲೆತ್ನಿಸಿದೆ, ಅವರು ಫೋನ್ ಸಂಪರ್ಕಕ್ಕೆ ಸಿಗಲಿಲ್ಲ ಎಂದರು.

ಬಿಜೆಪಿ ನಾಯಕರು ಏನು ಹೇಳುತ್ತಾರೆ ಎಂದು ಅವರಿಗೇ ಗೊತ್ತಿಲ್ಲ. ನಮ್ಮ ಮನೆಗೆ ಲಗ್ಗೆ ಹಾಕಲು ಪ್ರಯತ್ನ ಮಾಡಿ ಅದರಲ್ಲಿ ಯಶಸ್ವಿಯಾಗಲಿಲ್ಲ. ಮೊದಲು ಅವರ ಪಕ್ಷದೊಳಗೆ ಸರಿ ಮಾಡಿಕೊಳ್ಳಲು ನೋಡಿಕೊಳ್ಳಲಿ. ಕಾಂಗ್ರೆಸ್ ನಲ್ಲಿ ಎಲ್ಲರೂ ಚೆನ್ನಾಗಿದ್ದೇವೆ. ಯಾರ ಮಧ್ಯೆಯೂ ಅಸಮಾಧಾನವಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT