ಮಮತಾ ಬ್ಯಾನರ್ಜಿ ಮತ್ತು ಕುಮಾರಸ್ವಾಮಿ
ಕೊಲ್ಕೋತಾ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಿಂದ ದೇಶದ ಜನತೆ ಬೇಸತ್ತಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಉತ್ತಮ ಆಡಳಿತಗಾರ್ತಿ, ಹಾಗೂ ದೇಶವನ್ನು ಮುನ್ನಡೆಸುವ ಎಲ್ಲಾ ರೀತಿಯ ಸಾಮರ್ಥ್ಯ ಹೊಂದಿದ್ದಾರೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಪಿಟಿಐ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಕುಮಾರ ಸ್ವಾಮಿ, 2019ರ ಲೋಕಸಭೆ ಚುನಾವಣೆ ಗೆಲ್ಲಲು ಉತ್ತಮ ನಾಯಕತ್ವ ಬೇಕಾಗಿದೆ, ಪ್ರಚಲಿತ ಸಮಸ್ಯೆಗಳ ಬಗ್ಗೆ ಫೋಕಸ್ ಮಾಡಿ ಮುನ್ನಡೆಸುವಂತ ಸಾಮರ್ಥ್ಯ ಇರುವುದು ಮಮತಾ ಬ್ಯಾನರ್ಜಿ ಅವರಿಗಿದೆ ಎದು ಹೊಗಳಿದ್ದಾರೆ.
ದೇಶದ ಜನತೆ ನರೇಂದ್ರ ಮೋದಿ ಅವರ ಆಡಳಿತದಿಂದಾಗಿ ಅಸಮಾಧಾನಗೊಂಡಿದ್ದಾರೆ. ಹಲವು ರಾಜ್ಯಗಳು ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
ಮುಂದಿನ ದಿನಗಳಲ್ಲಿ ಎಲ್ಲಾ ವಿರೋಧ ಪಕ್ಷಗಳ ನಾಯಕರು ಒಟ್ಟಾಗಿ ಕುರಿತು ಯಾರ ನೇತೃತ್ವದಲ್ಲಿ ಮುಂಬರುವ ಲೋಕಸಭೆ ಚುನಾವಣೆ ಎಂದುರಿಸಬೇಕು ಎಂಬ ಬಗ್ಗೆ ಸಮಾಲೋಚಿಸುತ್ತೇವೆ ಎಂದು ಹೇಳಿದ್ದಾರೆ,
ಮಮತಾ ಬ್ಯಾನರ್ಜಿ ಸರಳತೆಯಲ್ಲಿ ಅತಿ ಸರಳ, ಉತ್ತಮ ಆಡಳಿತಗಾರ್ತಿ, ಪಶ್ಚಿಮ ಬಂಗಾಳದಲ್ಲಿ ಹಲವು ವರ್ಷಗಳ ಕಾಲ ಆಳ್ವಿಕೆ ನಡೆಸಿರುವ ಅವರು ಈಗಾಗಲೇ ಅದನ್ನು ನಿರೂಪಿಸಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos