ಬೆಂಗಳೂರು: ಬಿಜೆಪಿಯವರ ಆಪರೇಷನ್ ಕಮಲ ಇನ್ನೂ ಮುಂದುವರೆದಿದ್ದು, ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯವರು ಆಮಿಷವೊಡ್ಡುವುದನ್ನು ಇನ್ನೂ ನಿಲ್ಲಿಸಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಆರೋಪಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಿನ್ನೆ ಸಹ ಕಾಂಗ್ರೆಸ್ ಶಾಸಕರೊಬ್ಬರಿಗೆ ಬಿಜೆಪಿ ಪ್ರಮುಖರು ಕರೆ ಮಾಡಿ, ದೊಡ್ಡ ಮೊತ್ತದ ಆಮಿಷವೊಡ್ಡಿದ್ದು, ಬಿಜೆಪಿ ಗಿಫ್ಟ್ ಮೊತ್ತ ಕೇಳಿದರೆ ಅಚ್ಚರಿಯಾಗುತ್ತದೆ. ನಿಮಗೆ ಗಿಫ್ಟ್ ಕಳುಹಿಸಬೇಕು, ಯಾವ ಜಾಗಕ್ಕೆ ಕಳುಹಿಸಲಿ ಎಂದು ಕಾಂಗ್ರೆಸ್ ಶಾಸಕರನ್ನು ಕೇಳಿದ್ದರು ಎಂದರು.
ಬಿಜೆಪಿಯ ಆಮಿಷವನ್ನು ಕಾಂಗ್ರೆಸ್ ಶಾಸಕರು ನಿರಾಕರಿಸಿ, ತಮ್ಮ ಪಾಡಿಗೆ ತಮ್ಮನ್ನು ಕೆಲಸ ಮಾಡಲು ಬಿಡುವಂತೆ ಬಿಜೆಪಿಗೆ ತಿರುಗೇಟು ನೀಡಿದ್ದಾರೆ ಎಂದರು.
ಬಿಜೆಪಿಯವರಿಗೆ ಇಷ್ಟೊಂದು ಹಣ ಎಲ್ಲಿಂದ ಬರುತ್ತಿದೆ..? ಆ ಲೆಕ್ಕ ಕೇಳಿದರೆ ನೀವೇ ಆಶ್ಚರ್ಯಪಡುತ್ತೀರಾ' ಎಂದು ಸಿಎಂ ಹೊಸ ಬಾಂಬ್ ಸಿಡಿಸಿದ್ದಾರೆ. ಸಿಎಂ ಅವರ ಈ ಹೇಳಿಕೆ ಹಲವು ಕುತೂಹಲ ಮತ್ತು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics