ಪ್ರಿಯಾಂಕಾ ಗಾಂಧಿ(ಸಂಗ್ರಹ ಚಿತ್ರ) 
ರಾಜಕೀಯ

ಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶ ಬಿಜೆಪಿಯಲ್ಲಿ ನಡುಕ ಹುಟ್ಟಿಸಿದೆ; ಮಲ್ಲಿಕಾರ್ಜುನ ಖರ್ಗೆ

ಪ್ರಿಯಾಂಕಾ ಗಾಂಧಿಯವರ ರಾಜಕೀಯ ಪ್ರವೇಶ ಬಿಜೆಪಿಗೆ ನಡುಕ ಹುಟ್ಟಿಸಿದೆ ಎಂದು ಲೋಕಸಭೆ ...

ಕಲಬುರಗಿ: ಪ್ರಿಯಾಂಕಾ ಗಾಂಧಿಯವರ ರಾಜಕೀಯ ಪ್ರವೇಶ ಬಿಜೆಪಿಯಲ್ಲಿ ನಡುಕ ಹುಟ್ಟಿಸಿದೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ, ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಕಲಬುರಗಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕಾ ಗಾಂಧಿಯವರ ರಾಜಕೀಯ ಪ್ರವೇಶದಿಂದ ಯುವಕರಲ್ಲಿ ಉತ್ಸಾಹ ಮೂಡಿದ್ದು ಕಾಂಗ್ರೆಸ್ ಗೆ ಲಾಭವಾಗಿದೆ. ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿಯವರನ್ನು ಪ್ರಿಯಾಂಕಾರಲ್ಲಿ ನಾವು ಕಾಣುತ್ತೇವೆ ಎಂದರು.

ತಮಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಮಲ್ಲಿಕಾರ್ಜುನ ಖರ್ಗೆಯವರು ಕಾರಣ ಎಂದು ಚಿಂಚೋಳಿ ಕ್ಷೇತ್ರದ ಶಾಸಕ ಉಮೇಶ್ ಜಾಧವ್ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯಿಸಿದ ಖರ್ಗೆ, ಯಾರಿಗಾದರೂ ನನ್ನನ್ನು ಟೀಕಿಸಬೇಕು ಎಂದು ಎನಿಸಿದರೆ ಟೀಕಿಸಲಿ. ನಾನು ಅದನ್ನು ಸ್ವೀಕರಿಸುತ್ತೇನೆ, ಈ ರಾಜ್ಯದ ಜನತೆಗೆ ನಾನು ಏನು, ನಾನು ಮಾಡಿರುವ ಕೆಲಸ ಏನು ಎಂದು ಗೊತ್ತಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ

'ನನ್ನ ಚೋಲಿ ಬಗ್ಗೆ 6 ಜನರಿಂದ ಪ್ಯಾನಲ್ ಡಿಸ್ಕಷನ್, ಸಂಸ್ಕೃತಿ ಬಟ್ಟೆಯಲ್ಲ, ಹೃದಯದಲ್ಲಿದೆ'; ರಾಖಿ ಜಾಹೀರಾತು ವಿವಾದ ಬಗ್ಗೆ ಮೌನ ಮುರಿದ ನಟಿ Kriti Sanon

ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್'ಗೆ ಕೊನೆಗೂ ಮುಹೂರ್ತ ಫಿಕ್ಸ್; ನಾಳೆಯೇ ಮೀಸಲಾತಿ ಪಟ್ಟಿ ಪ್ರಕಟ

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ