ಆನಂದ್ ಸಿಂಗ್, ಕಂಪ್ಲಿ ಗಣೇಶ್ 
ರಾಜಕೀಯ

ಪೊಲೀಸರಿಗೆ ಮೂರು ಬಾರಿ ಚಳ್ಳೆ ಹಣ್ಣು ತಿನ್ನಿಸಿದ ಕಂಪ್ಲಿ ಶಾಸಕ ಜೆಎನ್ ಗಣೇಶ್!

ಕಾಂಗ್ರೆಸ್ ಶಾಸಕ ಅನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ನಂತರ ತಲೆಮರೆಸಿಕೊಂಡಿರುವ ...

ಬೆಂಗಳೂರು: ಕಾಂಗ್ರೆಸ್ ಶಾಸಕ ಅನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ನಂತರ ತಲೆಮರೆಸಿಕೊಂಡಿರುವ ಕಂಪ್ಲಿ ಗಣೇಶ್ ಪೊಲೀಸರಿಂದ ಮೂರು ಬಾರಿ ತಲೆಮರೆಸಿಕೊಂಡಿದ್ದಾರೆ.
ಶಾಸಕ ಕಂಪ್ಲಿಯನ್ನು ಮೂರು ಬಾರಿ ಪೊಲೀಸರು ಬಂಧಿಸಲು ಯತ್ನಿಸಿದಾಗಲೂ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ರಾಮನಗರ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳುವ ಪ್ರಕಾರ, ಎರಡು ದಿನಗಳ ಹಿಂದೆ ಬೆಂಗಳೂರು ಹೊರವಲಯದಲ್ಲಿ ಪೊಲೀಸರು ಕಂಪ್ಲಿ ಗಣೇಶ್ ನನ್ನು ಬಂಧಿಸಬೇಕಾಗಿತ್ತು. ಆದರೆ ಪೊಲೀಸರು ಬರುವ ಮಾಹಿತಿ ಮೊದಲೇ ಗೊತ್ತಾಗಿ ಎಸ್ ಯುವಿ ವಾಹನದಲ್ಲಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರು ಶಾಸಕರ ವಾಹನವನ್ನು ಅಟ್ಟಾಡಿಸಿಕೊಂಡು ಹೋದರೂ ಕೂಡ ಹಿಡಿಯಲು ಸಾಧ್ಯವಾಗಿಲ್ಲ. 
ಇಂದು ರಾಮನಗರ ನ್ಯಾಯಾಲಯ ಮುಂದೆ ಕಂಪ್ಲಿ ಗಣೇಶ್ ಶರಣಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಆದರೆ ಪೊಲೀಸರು ಅದನ್ನು ನಿರಾಕರಿಸುತ್ತಾರೆ. ಪೊಲೀಸರ ಚಲನವಲನಗಳನ್ನು ತಮ್ಮ ಸ್ನೇಹಿತರು ಮತ್ತು ಅನುಯಾಯಿಗಳ ನೆರವಿನಿಂದ ಗಣೇಶ್ ಪಡೆದುಕೊಳ್ಳುತ್ತಿದ್ದು ಅವರು ಪೊಲೀಸರಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. 
ಗಣೇಶ್ ಬಂಧನಕ್ಕೆ ರಾಮನಗರ ಜಿಲ್ಲಾ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ. ರಾಜ್ಯಾದ್ಯಂತ ಕೇಂದ್ರ ಅಪರಾಧ ವಿಭಾಗದ ಎಲ್ಲಾ ಘಟಕಕ್ಕೆ ಸಹ ಮುನ್ನೆಚ್ಚರಿಕೆ ನೀಡಲಾಗಿದೆ. ಕಂಪ್ಲಿ ಗಣೇಶ್ ನ ಮನೆಗೆ ಭೇಟಿ ನೀಡುವ ಸ್ನೇಹಿತರು ಮತ್ತು ಬಂಧುಗಳ ಮೇಲೆ ಸಹ ಕಣ್ಣಿಡುವಂತೆ ಸೂಚಿಸಲಾಗಿದೆ.
ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ಕಂಪ್ಲಿ ಗಣೇಶ್ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಕೋರ್ಟ್ ಮುುಂದೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ನ್ಯಾಯಾಲಯ ಇನ್ನೂ ಈ ಬಗ್ಗೆ ವಿಚಾರಣೆ ಕೈಗೊಂಡಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT