ದಿನೇಶ್ ಗುಂಡೂರಾವ್ 
ರಾಜಕೀಯ

ಎಸ್ ಟಿ ಸೇಮಶೇಖರ್ ಗೆ ಕೆಪಿಸಿಸಿಯಿಂದ ಶೋಕಾಸ್ ನೊಟೀಸ್-ದಿನೇಶ್ ಗುಂಡೂರಾವ್

ಶಾಸಕ ಎಸ್ ಟಿ ಸೋಮಶೇಖರ್ ಅವರ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಕಾರಣ ಕೇಳಿ ಅವರಿಗೆ ...

ಬೆಂಗಳೂರು: ಶಾಸಕ ಎಸ್ ಟಿ ಸೋಮಶೇಖರ್ ಅವರ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಕಾರಣ ಕೇಳಿ ಅವರಿಗೆ ಶೋಕಾಸ್ ನೊಟೀಸ್ ಜಾರಿ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸಿದ್ದರಾಮಯ್ಯನವರು ಮತ್ತೆ ಸಿಎಂ ಆಗಲು ನಾವು ಬಯಸುತ್ತಿದ್ದೇವೆ. ಮೈತ್ರಿ ಸರ್ಕಾರದ ಆಡಳಿತದಲ್ಲಿ ಬೆಂಗಳೂರಿನ ಅಭಿವೃದ್ಧಿಯ ಕೆಲಸಗಳು ಕುಂಠಿತವಾಗಿವೆ ಎಂದು ಶಾಸಕ ಸೋಮಶೇಖರ್ ನೀಡಿರುವ ಹೇಳಿಕೆಗೆ ದಿನೇಶ್ ಗುಂಡೂರಾವ್ ಗರಂ ಆಗಿದ್ದಾರೆ.

ಪಕ್ಷದ ಯಾವುದೇ ಶಾಸಕರು ಬಹಿರಂಗವಾಗಿ ಹೇಳಿಕೆಗಳನ್ನು ನೀಡಬಾರದು, ಅದನ್ನು ನಾವು ಒಪ್ಪುವುದಿಲ್ಲ. ಅವರಿಗೆ ಏನಾದರೂ ಸಮಸ್ಯೆಗಳಿದ್ದರೆ ಅದನ್ನು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರಲ್ಲಿ ಚರ್ಚೆ ನಡೆಸಬೇಕಿತ್ತು. ಮೈತ್ರಿ ಸರ್ಕಾರದಲ್ಲಿ ಏನೇ ಸಮಸ್ಯೆಗಳಿದ್ದರೂ ನಮ್ಮ ಬಳಿ ಬಂದು ಚರ್ಚೆ ಮಾಡಬೇಕು. ಅದು ಬಿಟ್ಟು ಬಹಿರಂಗವಾಗಿ ಈ ರೀತಿ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದರು.

ಎಸ್ ಟಿ ಸೋಮಶೇಖರ್ ಅವರ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ, ಅದು ಶಿಸ್ತನ್ನು ಮೀರುವ ಹೇಳಿಕೆ. ಮೈತ್ರಿ ಸರ್ಕಾರ ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಗಮನಹರಿಸಿದೆ. ಹಲವು ಯೋಜನೆಗಳನ್ನು ಪ್ರಕಟಿಸಿ ಕೋಟ್ಯಂತರ ರೂಪಾಯಿ ಮೀಸಲಿಟ್ಟಿದೆ. ಇಂತಹ ಸಂದರ್ಭದಲ್ಲಿ ಸೋಮಶೇಖರ್ ಅವರು ಈ ರೀತಿ ಹೇಳಿಕೆ ಏಕೆ ಕೊಟ್ಟಿದ್ದಾರೆ ಎಂದು ಕಾರಣ ಕೇಳಿ ಶೋಕಾಸ್ ನೊಟೀಸ್ ನೀಡಲಾಗುವುದು, ಅವರ ಉತ್ತರ ಅಸಮರ್ಪಕವಾಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸದಲ್ಲೇ ಮೊದಲು: ಪ್ರತಿಭಟಿಸುವುದಾದರೆ ಸದನದ ಬಾವಿಗೆ ಬನ್ನಿ; ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ; ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ; Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!

ಕೇವಲ 4 ಚಿತ್ರ ಮಾಡಿದ ನಟನಿಗೆ 'ಸರ್' ಅಂತೀರಲ್ಲ ಶಿವಣ್ಣ; ಸೆಂಚೂರಿ ಸ್ಟಾರ್ ವಿರುದ್ಧ ಕನ್ನಡಿಗರ ಬೇಸರ, Video!