ಆನಂದ್ ಸಿಂಗ್ 
ರಾಜಕೀಯ

ಸಮ್ಮಿಶ್ರ ಸರ್ಕಾರಕ್ಕೆ ಕೆಟ್ಟ ಸುದ್ದಿ: ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜಿನಾಮೆ?

ದಿಢೀರ್ ಬೆಳವಣಿಗೆಯೊಂದರಲ್ಲಿ ಬಳ್ಳಾರಿ ಜಿಲ್ಲೆಯ ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ....

ಬೆಂಗಳೂರು: ದಿಢೀರ್ ಬೆಳವಣಿಗೆಯೊಂದರಲ್ಲಿ ಬಳ್ಳಾರಿ ಜಿಲ್ಲೆಯ ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಂಗಳೂರಿನ ದೊಮ್ಮಲೂರಿನಲ್ಲಿರುವ ಸ್ಪೀಕರ್ ರಮೇಶ್ ಕುಮಾರ್  ಅವರ ಮನೆಗೆ ತೆರಳಿ ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇನ್ನೂ ಹಲವು ಕಾಂಗ್ರೆಸ್ ಶಾಸಕರು ರಾಜಿನಾಮೆ ಸಲ್ಲಿಸುವ ಸಾಧ್ಯತೆಯಿದೆ.
ಹಲವು ಕಾಂಗ್ರೆಸ್ ಶಾಸಕರು ತಮ್ಮ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು ಭಾರಿ ಕುತೂಹಲ ಸೃಷ್ಟಿಸಿದೆ, ಮೂಲಗಳ ಪ್ರಕಾರ ಶಾಸಕ ಬಿ.ಸಿ ಪಾಟೀಲ್, ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಹಾಗೂ ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಟಳ್ಳಿ ಸೇರಿದಂತೆ ಹಲವು ಶಾಸಕರು ಶೀಘ್ರದಲ್ಲೇ ರಾಜಿನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.
ಇನ್ನೂ ಆನಂದ್ ಸಿಂಗ್ ಅವರ ರಾಜಿನಾಮೆ ಬಗ್ಗೆ ಸ್ಪೀಕರ್ ಕಚೇರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಆದರೆ ಆನಂದ್ ಸಿಂಗ್ ಆಪ್ತರು  ರಾಜಿನಾಮೆ ಖಚಿತ ಪಡಿಸಿದ್ದಾರೆ ಎಂದು ತಿಳಿದು ಬಂದಿದೆ, 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!