ಎಚ್ ಡಿ ದೇವೇಗೌಡ 
ರಾಜಕೀಯ

ಜೆಡಿಎಸ್ ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದ ಪದಾಧಿಕಾರಿಗಳ ನೇಮಕ

ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಜೆಡಿಎಸ್ ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ ಹೆಚ್ ಡಿ ದೇವೇಗೌಡ ಮುಂದಾಗಿದ್ದಾರೆ.ಬೇರುಮಟ್ಟದಲ್ಲಿ ಪಕ್ಷವನ್ನು ಬಲಗೊಳಿಸಲು ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪದಾಧಿಕಾರಿಗಳ ನೇಮಕ ಮಾಡುತ್ತಿದ್ದಾರೆ.

ಬೆಂಗಳೂರು:ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಜೆಡಿಎಸ್  ಪಕ್ಷವನ್ನು ಬಲಗೊಳಿಸುವ ನಿಟ್ಟಿನಲ್ಲಿ  ಹೆಚ್ ಡಿ ದೇವೇಗೌಡ ಮುಂದಾಗಿದ್ದಾರೆ. ಬೇರುಮಟ್ಟದಲ್ಲಿ ಪಕ್ಷವನ್ನು ಬಲಗೊಳಿಸಲು ರಾಜ್ಯಾದಾದ್ಯಂತ ಪಾದಯಾತ್ರೆ ಮಾತ್ರವಲ್ಲದೇ, ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ  ಪದಾಧಿಕಾರಿಗಳ ನೇಮಕ ಮಾಡುತ್ತಿದ್ದಾರೆ.
ಬೆಂಗಳೂರು ನಗರ ಜೆಡಿಎಸ್ ಯುವ ವಿಭಾಗದ ಅಧ್ಯಕ್ಷರನ್ನಾಗಿ ಎಎಂ ಪ್ರವೀಣ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಹೆಚ್ ಕೆ ಕುಮಾರಸ್ವಾಮಿ ಅವರನ್ನು ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ , ಬೆಂಗಳೂರು ನಗರದ ಜೆಡಿಎಸ್ ಯುವ ವಿಭಾಗಕ್ಕೆ ಎ. ಎಂ ಪ್ರವೀಣ್ ಕುಮಾರ್ ಅವರನ್ನು ಅಧಿಕೃವಾಗಿ ನೇಮಿಸಲಾಗಿದೆ.
ಸಮ್ಮಿಶ್ರ ಸರ್ಕಾರದ ಸೂತ್ರದಂತೆ ನಿಗಮ ಮಂಡಳಿಗಳಿಗೆ ನೇಮಕ ಪ್ರಕ್ರಿಯೆಗೂ ಜೆಡಿಎಸ್ ಚಾಲನೆ ನೀಡಿದ್ದು, ಆರ್ಯ ವೈಶ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ  ವಿಧಾನಪರಿಷತ್ ಸದಸ್ಯ ಟಿಎಸ್ ಶರವಣ ಅವರನ್ನು ನೇಮಕ ಮಾಡಲಾಗಿದೆ. 
ಕೆಪಿಸಿಸಿ ವಜಾ ಆದ ನಂತರ ಜೆಡಿಎಸ್ ಕೂಡಾ ತನ್ನ ಪದಾಧಿಕಾರಿಗಳ ನೇಮಕಕ್ಕೆ ಮುಂದಾಗಿದ್ದು,ಉಭಯ ಪಕ್ಷಗಳಿಂದ ಸರಣಿ ಸಭೆಗಳನ್ನು ನಡೆಸಲಾಗುತ್ತಿದೆ.ಜುಲೈ 12 ರಿಂದ ಆರಂಭವಾಗಲಿರುವ ಬಜೆಟ್ ಅಧಿವೇಶನಕ್ಕೂ ಮುನ್ನ ಪದಾಧಿಕಾರಿಗಳ ನೇಮಕವನ್ನು ಉಭಯ ಪಕ್ಷಗಳು ಪೂರ್ಣಗೊಳಿಸುವ ವಿಶ್ವಾಸದಲ್ಲಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

ಬೆಂಗಳೂರಿನಲ್ಲಿ CJP ಪ್ರತಿಭಟನೆ: ಪ್ರಕಾಶ್ ರಾಜ್, YouTuber ಧ್ರುವ್ ರಾಠಿ ಭಾಗಿ; CEC ರಾಜೀನಾಮೆಗೆ ಬಿಗಿಪಟ್ಟು..!

ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ