ರಾಜಕೀಯ

ಲೋಕಸಭೆ: ಚೊಚ್ಚಲ ಭಾಷಣದಲ್ಲಿ ಮಂಡ್ಯ ಸಮಸ್ಯೆಗಳ ಗಮನ ಸೆಳೆದ ಸುಮಲತಾ ಅಂಬರೀಷ್

Shilpa D
ನವದೆಹಲಿ: ರಾಜ್ಯದ ಭತ್ತ ಮತ್ತು ಕಬ್ಬು ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಹೇಳುವ ಮೂಲಕ ಸಂಸತ್ತಿನಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ರಾಜ್ಯದ ಸಮಸ್ಯೆಗಳ ಬಗ್ಗೆ ಗಮನ ಸೆಳೆದಿದ್ದಾರೆ.
ಇಂದು ಲೋಕಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣ ಮಾಡಿದ ಸುಮಲತಾ ಮೊದಲಿಗೆ ಕನ್ನಡದಲ್ಲಿ ಭಾಷಣ ಆರಂಭಿಸಿದರು, ನನ್ನ ಹೆಮ್ಮೆಯ ಕ್ಷೇತ್ರವಾದ ಮಂಡ್ಯದ ಸ್ವಾಭಿಮಾನಿ ಜನತೆಗೆ ಕೃತಜ್ಞತೆ ಅರ್ಪಿಸಿದ ಸುಮಲತಾ, ರೈತರ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ಮಳೆಯಿಲ್ಲದೇ ರಾಜ್ಯದಲ್ಲಿ ನೀರಿನ ಸಮಸ್ಯೆ ಹಾಗೂ ರಾಜ್ಯದಲ್ಲಿ ಬರ ತೀವ್ರವಾಗಿದ್ದು, ರೈತರು ಮಾಡಿದ ಬ್ಯಾಂಕ್ ಸಾಲ ತೀರಿಸಲಾಗದ ಪರಿಸ್ಥಿತಿಯಲ್ಲಿದ್ದಾರೆ. ಇದರ ಜೊತೆಗೆ ಕುಡಿಯುವ ನೀರಿನ ಸಮಸ್ಯೆ ಹಾಗೂ ಗೋವುಗಳಿಗೆ ಮೇವಿನ ಸಮಸ್ಯೆ  ಎದುರಾಗಿದೆ, ಹೀಗಾಗಿ ಪ್ರಧಾನ ಮಂತ್ರಿ ಮತ್ತು ಕೇಂದ್ರ ಕೃಷಿ ಸಚಿವರು ಸಂಬಂಧ ಗಮನ ಹರಿಸಿ ಬರ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. 
ನಾವು ಅನ್ನದಾತನನ್ನು ರಕ್ಷಣೆ ಮಾಡುವ ಅವಶ್ಯಕತೆಯಿದೆ, ಮಾನ್ಸೂನ್ ವೈಫಲ್ಯವಲ್ಲ, ಅವರಿಗೆ ಸೂಕ್ತ ಪರಿಹಾರ ಒದಗಿಸದಿದ್ದರೇ ನಮ್ಮ ವೈಫಲ್ಯವೂ ಕಾರಣವಾಗುತ್ತದೆ, ಜೈ ಜವಾನ್, ಜೈ ಕಿಸಾನ್, ಜೈ ಕರ್ನಾಟಕ ಎಂದು ಹೇಳುವ ಮೂಲಕ ಸುಮಲತಾ ತಮ್ಮ ಭಾಷಣ ಮುಗಿಸಿದ್ದಾರೆ.
SCROLL FOR NEXT