ಸಿದ್ದರಾಮಯ್ಯ 
ರಾಜಕೀಯ

ಪ್ರಧಾನಿ ಮೋದಿ, ಅಮಿತ್ ಶಾ ಅಧಿಕಾರ, ಹಣಬಲದಿಂದ ಕಾಂಗ್ರೆಸ್ ಶಾಸಕರನ್ನು ಸೆಳೆಯುತ್ತಿದ್ದಾರೆ: ಸಿದ್ದರಾಮಯ್ಯ

ಆಪರೇಷನ್ ಕಮಲದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಕೈವಾಡ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮೈತ್ರಿ ಸರ್ಕಾರದ...

ಬೆಂಗಳೂರು: ಆಪರೇಷನ್ ಕಮಲದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಕೈವಾಡ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯಯ್ಯ ಅವರು ಗಂಭೀರ ಆರೋಪ ಮಾಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲದ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಇದ್ದಾರೆ.‌ ಹಣ ಹಾಗೂ ಅಧಿಕಾರ ಬಲದಿಂದ ಪಕ್ಷದ ಶಾಸಕರನ್ನು ಬಿಜೆಪಿ ತನ್ನತ್ತ ಸೆಳೆದುಕೊಂಡಿದೆ ಎಂದರು.
ಅಧಿಕಾರ, ಹಣಬಲದಿಂದ ಆಪರೇಷನ್ ಕಮಲ ಕಾರ್ಯಾಚರಣೆ ನಡೆಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್ ಶಾಸಕರನ್ನು ವಾಮಮಾರ್ಗದ ಮೂಲಕ ತನ್ನತ್ತ ಸೆಳೆದುಕೊಳ್ಳುತ್ತಿದ್ದಾರೆ ಎಂದರು.
ಆಪರೇಷನ್ ಕಮಲದ ಹಿಂದೆ ಅಮಿತ್ ಶಾ ಇರಬೇಕು. ಶಾಸಕರನ್ನು ರಾಜೀನಾಮೆ ಕೊಡಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗಿಯಾಗಿದ್ದಾರೆ. ಆನಂದ್ ಸಿಂಗ್, ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿರುವುದು ನಿಜ. ಮುಂದೆ ಅವರೇನು ಮಾಡುತ್ತಾರೆ ಎನ್ನುವುದು ಗೊತ್ತಿಲ್ಲ. ಆದರೆ ಅವರು ಬಿಜೆಪಿಗೆ ಹೋಗುವುದಿಲ್ಲ ಎನ್ನುವ ಮೂಲಕ ಸಿದ್ದರಾಮಯ್ಯ, ಮೈತ್ರಿ ಸರ್ಕಾರಕ್ಕೆ ಅಪಾಯವಿಲ್ಲ ಎಂದು ಹೇಳಿದ್ದಾರೆ.
ಶಾಸಕರ ರಾಜೀನಾಮೆ ಹಾಗೂ ಬಿಜೆಪಿ ಆಪರೇಷನ್ ಕಮಲ ವಿಚಾರವಾಗಿ ಚರ್ಚಿಸಲು ತಾವು ತುರ್ತು ಶಾಸಕಾಂಗ ಸಭೆ ಕರೆದಿಲ್ಲ. ಅಲ್ಲದೇ ರಮೇಶ್ ಜಾರಕಿಹೊಳಿ ಹಾಗೂ ಆನಂದ್ ಸಿಂಗ್ ಇಬ್ಬರೂ ತಮ್ಮ ಸಂಪರ್ಕಕ್ಕೆ ಸಿಗುತ್ತಿಲ. ಸಂಪರ್ಕ ಸಾಧ್ಯವಾದಲ್ಲಿ ತಾವು ಅವರೊಂದಿಗೆ ಮಾತನಾಡುವುದಾಗಿ ತಿಳಿಸಿದರು.
ಬಿಜೆಪಿಯವರ ತಂತ್ರಗಾರಿಕೆ ಬೇರೆಯೇ ಇದೆ. ಅವರು ಆಪರೇಷನ್ ಕಮಲ ಮಾಡುತ್ತಲೇ ಇದ್ದಾರೆ. ನಮ್ಮ ಶಾಸಕರನ್ನು ಖರೀದಿಸಿ, ತಾವೇನೂ ಮಾಡಿಯೇ ಇಲ್ಲ. ಮೈತ್ರಿ ನಾಯಕರಲ್ಲಿಯೇ ಕಚ್ಚಾಟ ಇದೆ ಎಂದು ದೂಷಿಸುವ ನಾಟಕ ಆಡುತ್ತಾರೆ. ಬಿಜೆಪಿಯಿಂದ ಸರ್ಕಾರ ಪತನವಾಯಿತು ಎನ್ನುವುದನ್ನು ಮುಚ್ಚಿಹಾಕಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿಯ ನಾಯಕರಿಗ ಹಿಂಬಾಗಿಲಿನಿಂದ ಬಂದು ಅಧಿಕಾರ ಹಿಡಿಯಬೇಕು. ಸರ್ಕಾರ ಉರುಳಿಸಿ ಅಧಿಕಾರಕ್ಕೆ ಬರಬೇಕು ಎಂಬ ಗುರಿ ಇದೆ. ಹೀಗಾಗಿ ನಮ್ಮ ಶಾಸಕರಿಗೆ ಆಮಿಷವೊಡ್ಡುತ್ತಲೇ ಇದ್ದಾರೆ. ಆದರೆ ಮೈತ್ರಿ ಸರ್ಕಾರ ನೂರಕ್ಕೆ ನೂರರಷ್ಟು ಸುಭದ್ರವಾಗಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!