ರಮೇಶ್ ಕುಮಾರ್ ಮತ್ತು ಆನಂದ್ ಸಿಂಗ್ 
ರಾಜಕೀಯ

ರಾಜ್ಯಪಾಲರಲ್ಲ, ರಾಷ್ಟ್ರಪತಿಯವರಿಗೆ ರಾಜಿನಾಮೆ ನೀಡಲಿ: ಆನಂದ್ ಸಿಂಗ್ ವಿರುದ್ಧ ಸ್ಪೀಕರ್ ಕೆಂಡಾಮಂಡಲ

ಶಾಸಕ ಆನಂದ್ ಸಿಂಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರ ತಮ್ಮ ಕೈಸೇರಿದೆ. ಆದರೆ ಇನ್ನೊಬ್ಬ ಶಾಸಕರ ರಾಜೀನಾಮೆ ವಿಚಾರ ,.,,

ಬೆಂಗಳೂರು: ಶಾಸಕ ಆನಂದ್ ಸಿಂಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರ ತಮ್ಮ ಕೈಸೇರಿದೆ. ಆದರೆ ಇನ್ನೊಬ್ಬ ಶಾಸಕರ ರಾಜೀನಾಮೆ ವಿಚಾರ ಗೊತ್ತಿಲ್ಲ. ಆನಂದ್‌ ಸಿಂಗ್ ವಿಚಾರದಲ್ಲಿ ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನಸಭೆಯ ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರು ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ ಎಂದು ಯಾರು ಹೇಳಿದ್ದಾರೆ ? ಅಧಿಕೃತವಾಗಿ ಒಬ್ಬ ಶಾಸಕರು ಮಾತ್ರ ರಾಜೀನಾಮೆ ಕೊಟ್ಟಿದ್ದಾರೆ. ಅದನ್ನು ಪರಿಶೀಲಿಸುತ್ತೇನೆ, ಜನರಿಗೆ ಶಾಸಕರ ವರ್ತನೆ ಇಷ್ಟ ಆಗದಿದ್ದಲ್ಲಿ ಅವರನ್ನು ತಿರಸ್ಕರಿಸುವ ಅವಕಾಶ ಸಂವಿಧಾನದಲ್ಲಿ ಇಲ್ಲ. ಇಂಥ ಸಂದರ್ಭದಲ್ಲಿ ಸಾರ್ವಜನಿಕರ ಅಭಿಪ್ರಾಯ ಕೇಳಬೇಕಾಗಿದೆ. ಸಾರ್ವಜನಿಕರು ಯಾರು ಬೇಕಾದರೂ ಶಾಸಕರ ವಿರುದ್ಧ ದೂರು ನೀಡಬಹುದು ಎಂದು ಹೇಳಿದರು.
ಉತ್ತರ ಕೊಡಲು ಆಗದ ವಿಚಾರದ ಬಗ್ಗೆ ತಾವು ಮಾತನಾಡುವುದಿಲ್ಲ. ನಾನು ನನ್ನ ಕೆಲಸವನ್ನು ಅತ್ಯಂತ ಜವಾಬ್ದಾರಿಯಿಂದ ಮಾಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಸ್ಪೀಕರ್ ಉತ್ತರಿಸಿದರು.
ರಾಜೀನಾಮೆ ಕೊಟ್ಟ ಬಳಿಕ ಆನಂದ ಸಿಂಗ್ ರಾಜ್ಯಪಾಲರನ್ನು ಭೇಟಿ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಪರಮಾಧಿಕಾರ ಇಲ್ಲ. ನನಗೆ ಜವಾಬ್ದಾರಿ ಇದೆ, ಶಾಸಕರಾದವರಿಗೆ ರಾಜೀನಾಮೆ ಯಾರಿಗೆ ಕೊಡಬೇಕು ? ಹೇಗೆ ಕೊಡಬೇಕು ? ಎಂಬ ಅರಿವು ಇರಬೇಕು.

ಆ ಬಗ್ಗೆ ಅವರಿಗೆ ತಿಳುವಳಿಕೆಯೇ ಇಲ್ಲ ಎಂದರೆ ಅದು ನಮ್ಮ ಹಣೆಬರಹ, ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಕೊಟ್ಟಿದ್ದಾರೆ ಅಂದರೆ ಬೇರೆ ಉದ್ದೇಶ ಇರಬೇಕು. ಸಮಯ ಇದ್ದರೆ ರಾಷ್ಟ್ರಪತಿಯವರನ್ನೂ ಭೇಟಿಮಾಡಿ ರಾಜೀನಾಮೆ ಕೊಡಲಿ ಎಂದು ಯಾರ ಹೆಸರನ್ನೂ ಪ್ರಸ್ತಾಪಿಸದೆ ರಮೇಶ್ ಕುಮಾರ್ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!