ರಾಜಕೀಯ

ಮುಂದಿನ ಚುನಾವಣೆಯಲ್ಲಿ ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ?: ಕ್ಷೇತ್ರದಲ್ಲಿ ಮಿಂಚಿನ ಸಂಚಾರ!

: ಮತ್ತೆ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಮಾಜಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಬೂತ್ ...

ಮೈಸೂರು: ಮತ್ತೆ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಮಾಜಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಬೂತ್ ಮಟ್ಟದಲ್ಲಿ ಮ್ಯಾರಥಾನ್ ಸಭೆ ನಡೆಸಿದ್ದಾರೆ.
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ,ವರುಣಾ ಕ್ಷೇತ್ರದಲ್ಲಿ 59 ಸಾವಿರರಿಂದ 10 ಸಾವಿರಕ್ಕೆ ಕುಸಿದಿದೆ, ಹೀಗಾಗಿ ಜನರ ನಾಡಿಮಿಡಿತವನ್ನು ಅರಿತುಕೊಳ್ಳಲುತಳ ಮಟ್ಟದಿಂದ ಪಕ್ಷವನ್ನು ಬಲಗೊಳಿಸಲು ಸಿದ್ದರಾಮಯ್ಯ ಕ್ಷೇತ್ರಾದ್ಯಂತ ಸಂಚರಿಸಿ ಸಭೆ ನಡೆಸುತ್ತಿದ್ದಾರೆ. ಕಳೆದ 10 ವರ್ಷಗಳಲ್ಲಿ  ಸಿದ್ದರಾಮಯ್ಯ ಕ್ಷೇತ್ರವನ್ನು ಅಭಿವೃದ್ಧಿ ಗೊಳಿಸಿದ್ದಾರೆ. ಹೀಗಾಗಿ ಅವರು ಸೋಲುವ ಛಾನ್ಸೇ ಇಲ್ಲ ಎಂದು ತಿಳಿಸಿದ್ದಾರೆ.
ಎಲ್ಲಾ ಭಿನ್ನಾಭಿಪ್ರಾಯಗಳನ್ನು ಮರೆತು ಕಾರ್ಯಕರ್ತರೆಲ್ಲಾ ಒಟ್ಟಾಗಿ ಪಕ್ಷಕ್ಕಾಗಿ ದುಡಿಯಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಕೇವಲ ವರುಣಾ ಮಾತ್ರವಲ್ಲದೇ ಎಲ್ಲಾ ಕ್ಷೆತ್ರಗಳಲ್ಲೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದ್ದಾರೆ., ಜನರ ಸಮಸ್ಯೆಗಳನ್ನು ಆಲಿಸಿ ಅವರ ಜೊತೆ ಕೂತು ಚರ್ಚಿಸಬೇಕು, ಹೀಗಾದಾಗ ಜನರ ಜೊತೆಗಿನ ಬಾಂಧವ್ಯ  ಗಟ್ಟಿಯಾಗುತ್ತದೆ ಎಂದು ವರುಣಾ ಶಾಸಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ವರುಣಾ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಕೆಲವು ಸ್ಥಳೀಯ ನಾಯಕರ ಧೋರಣೆ, ಸಂಘಟನೆಯಲ್ಲಿ ಲೋಪ, ಕ್ಷೇತ್ರದಲ್ಲಿ ಬಿಜೆಪಿಯ ಬೆಳವಣಿಗೆ ಹೀಗೆ ಕೆಲವು ಕಾರಣಗಳಿಂದ ಕಾಂಗ್ರೆಸ್ ಹೆಚ್ಚು ಮತಗಳನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ಕಾರ್ಯಕರ್ತರು ಸಿದ್ದರಾಮಯ್ಯಗೆ ತಿಳಿಸಿದರು ಎನ್ನಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ