ರಾಜಕೀಯ

ಬಿಜೆಪಿ ಸರ್ಕಾರ ರಚನೆಗೆ ಸಿದ್ಧ- ಸದಾನಂದಗೌಡ

Nagaraja AB
ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ 14 ಶಾಸಕರ ರಾಜೀನಾಮೆಯಿಂದ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಪತನದತ್ತ ಸಾಗಿದ್ದು, ಬಿಜೆಪಿ ಸರ್ಕಾರ ರಚಿಸಲು ಸಿದ್ಧವಿದೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ಹೇಳಿದ್ದಾರೆ.
ಜನರ ಆಶೋತ್ತರಗಳಿಗೆ ಸ್ಪಂದಿಸದ ಸರ್ಕಾರದ ಧೋರಣೆಯಿಂದ ಬೇಸತ್ತು ರಾಜೀನಾಮೆ ನೀಡಿರುವುದಾಗಿ ಶಾಸಕರು ಹೇಳಿದ್ದಾರೆ. ರಾಜ್ಯದಲ್ಲಿ ಇಂತಹ ಚಟುವಟಿಕೆಗಳು ನಡೆಯತ್ತಲೇ ಇದೆ.  ರಾಜ್ಯ ಹಾಗೂ ಕ್ಷೇತ್ರದ ಜನರ ಹಿತರಕ್ಷಣೆ ನಿಟ್ಟಿನಲ್ಲಿ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ಹೊರಬಂದಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದರು.
ಸಂವಿಧಾನದ ಪ್ರಕಾರ ರಾಜ್ಯಪಾಲರು ಬಹುಮತ ಇರುವ ಪಕ್ಷವನ್ನು ಸರ್ಕಾರ ರಚನೆಗೆ ಆಹ್ವಾನಿಸಿದರೆ ಸರ್ಕಾರ ರಚನೆಗೆ ಸಿದ್ಧ ಇರುವುದಾಗಿ ಹೇಳಿದ ಸದಾನಂದಗೌಡ, ರಾಜೀನಾಮೆಯಿಂದ ಬಿಜೆಪಿಯ ಪಾತ್ರವಿಲ್ಲ, ಯಾವುದೇ ರೀತಿಯ ಆಪರೇಷನ್ ಕಮಲ ನಡೆಸಿಲ್ಲ ಎಂದು ಸ್ಪಷ್ಪಪಡಿಸಿದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರ ರಾಜೀನಾಮೆ ಹಿಂದೆ ಯಾವುದೇ ಬಿಜೆಪಿ ಮುಖಂಡರು ಅಥವಾ ಶಾಸಕರ ಪಾತ್ರವಿಲ್ಲ. ಸ್ವಇಚ್ಚೆಯಿಂದ ಸ್ವೀಕರ್ ಬಳಿ ತೆರಳಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ .ಆದ್ದರಿಂದ ರಾಜೀನಾಮೆಗೆ ಸಂಬಂಧಿಸಿದಂತೆ ಯಾವುದೇ ಹಂತದಲ್ಲಿ ಬಿಜೆಪಿಯಿಂದ ಯಾವುದೇ ಹಸ್ತಕ್ಷೇಪವಿಲ್ಲ ಎಂದು ಇದು ತೋರಿಸುತ್ತದೆ "ಎಂದು ಅವರು ಹೇಳಿದರು.
SCROLL FOR NEXT