ಆರ್. ಅಶೋಕ್ 
ರಾಜಕೀಯ

ಮೈತ್ರಿ ಸರ್ಕಾರದ ಪಾಪದ ಕೊಡ ತುಂಬಿದೆ- ಆರ್ .ಅಶೋಕ್

ಮೈತ್ರಿ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿಯ ಪಾತ್ರವಿಲ್ಲ, ನಾವು ಸೂತ್ರದಾರರು ಅಲ್ಲ, ಪಾತ್ರದಾರರೂ ಅಲ್ಲ, ವೀಕ್ಷಕರು ಮಾತ್ರ . ಮೈತ್ರಿ ಸರ್ಕಾರದ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ಹಿರಿಯ ಮುಖಂಡ ಆರ್. ಅಶೋಕ್ ಹೇಳಿದ್ದಾರೆ.

ಬೆಂಗಳೂರು: ಮೈತ್ರಿ ಶಾಸಕರ ರಾಜೀನಾಮೆ ಹಿಂದೆ ಬಿಜೆಪಿಯ ಪಾತ್ರವಿಲ್ಲ, ನಾವು ಸೂತ್ರದಾರರು ಅಲ್ಲ, ಪಾತ್ರದಾರರೂ ಅಲ್ಲ, ವೀಕ್ಷಕರು ಮಾತ್ರ . ಮೈತ್ರಿ ಸರ್ಕಾರದ ಪಾಪದ ಕೊಡ ತುಂಬಿದೆ ಎಂದು ಬಿಜೆಪಿ ಹಿರಿಯ ಮುಖಂಡ ಆರ್. ಅಶೋಕ್  ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್- ಜೆಡಿಎಸ್ ಮದುವೆ ಮುರಿದು ಬೀಳುವುದಕ್ಕೆ ನಾವು ಪುರೋಹಿತರಲ್ಲ. ಕಾಂಗ್ರೆಸ್ - ಜೆಡಿಎಸ್ ನೇತೃತ್ವದ ಸರ್ಕಾರ ಒಂದು ವರ್ಷದಿಂದ ರಾಜ್ಯವನ್ನು ಲೂಟಿ ಮಾಡಿದೆ. ಆ ಪಕ್ಷಗಳ ನಡುವಿನ ಗೊಂದಲ, ಅಸಮಾಧಾನಗಳ ಕಾರಣಕ್ಕಾಗಿ ಶಾಸಕರು ರಾಜೀನಾಮೆ ನೀಡಿದ್ದಾರೆ ಎಂದರು.
 ಬಿಜೆಪಿಗೂ ಕಾಂಗ್ರೆಸ್ - ಜೆಡಿಎಸ್ ಶಾಸಕರ ರಾಜೀನಾಮೆಗೂ ಯಾವುದೇ ಸಂಬಂಧವಿಲ್ಲ.  ಅವರು ರಾಜೀನಾಮೆ ನೀಡುವಲ್ಲಿ ನಮ್ಮ ಪಾತ್ರ ಏನೂ ಇಲ್ಲ ಎಂದು ಅವರು ಸ್ಪಷ್ಪಪಡಿಸಿದರು.
ಮುಂದಿನ ರಾಜಕೀಯ ನಡೆ ಬಗ್ಗೆ ವರಿಷ್ಠರು ಸಲಹೆ ಸೂಚನೆ ನೀಡಲಿದ್ದಾರೆ. ಅದರನ್ವಯ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಜೊತೆ ಸಮಾಲೋಚಿಸಿ ಎರಡು ಮೂರು ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT