ಹೆಚ್. ವಿಶ್ವನಾಥ್ 
ರಾಜಕೀಯ

ಒಟ್ಟಾರೇ 14 ಶಾಸಕರಿಂದ ಸ್ಪೀಕರ್ ಗೆ ರಾಜೀನಾಮೆ- ಎಚ್. ವಿಶ್ವನಾಥ್

ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಒಟ್ಟಾರೇ 14 ಮಂದಿ ಶಾಸಕರು ಸ್ಪೀಕರ್ ಗೆ ರಾಜೀನಾಮೆ ನೀಡಿರುವುದಾಗಿ ಜೆಡಿಎಸ್ ಪಕ್ಷದ ಶಾಸಕ ಹೆಚ್. ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಒಟ್ಟಾರೇ 14 ಮಂದಿ ಶಾಸಕರು ಸ್ಪೀಕರ್ ಗೆ ರಾಜೀನಾಮೆ ನೀಡಿರುವುದಾಗಿ ಜೆಡಿಎಸ್ ಪಕ್ಷದ ಶಾಸಕ ಹೆಚ್. ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ.
ರಾಜಭವನದಲ್ಲಿಂದು ರಾಜ್ಯಪಾಲರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ ಸಮ್ಮಿಶ್ರ ಸರ್ಕಾರ ವಿಫಲವಾಗಿದೆ. ಉಭಯ ಪಕ್ಷಗಳ ಶಾಸಕರನ್ನು ಸರ್ಕಾರ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ.ಸರ್ಕಾರದ ನಡೆ , ಧೋರಣೆ ವಿರುದ್ಧ  ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದರು.
ಉಭಯ ಪಕ್ಷಗಳ  ಶಾಸಕರ ನಡುವೆ ಸಮನ್ವಯ ಸಾಧಿಸುವ ವಿಚಾರದಲ್ಲೂ ಮುಖಂಡರು ವಿಫಲವಾಗಿದ್ದಾರೆ. ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಸಂಪೂರ್ಣ ಸತ್ತು ಹೋಗಿದೆ.ಈ ಎಲ್ಲಾ ಕಾರಣಗಳಿಂದ ತಮ್ಮ ಇಚ್ಚೆನುಸಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದರು.
ಎಲ್ಲಾ ಅತೃಪ್ತ ಶಾಸಕರು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದೇವೆ. ರಾಜೀನಾಮೆ ಅಂಗೀಕರಿಸುವಂತೆ ರಾಜ್ಯಪಾಲರಿಗೆ ಪ್ರತ್ಯೇಕವಾಗಿ ಪತ್ರ ಬರೆದು ಮನವಿ ಮಾಡಿದ್ದೇವೆ. ಸ್ಪೀಕರ್ ಕೂಡಾ  ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ಇದೇ ವೇಳೆ  ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ವಿಶ್ವನಾಥ್, ಆಪರೇಷನ್ ಕಮಲಕ್ಕೆ ಬಲಿಯಾಗಿ ರಾಜೀನಾಮೆ ನೀಡಿಲ್ಲ. ಇದೆಲ್ಲಾ ಮಾಧ್ಯಮಗಳ ಸೃಷ್ಟಿ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT