ರಾಜಕೀಯ

ರಾಜಕೀಯ ಬಿಕ್ಕಟ್ಟು: ದೇವೇಗೌಡರನ್ನು ಭೇಟಿಯಾದ ಡಿಕೆಶಿ

Nagaraja AB
ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಇಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
 ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರ ರಾಜೀನಾಮೆ ಹಿನ್ನೆಲೆಯಲ್ಲಿ ಸಮ್ಮಿಶ್ರ ಸರ್ಕಾರ 13 ತಿಂಗಳ ನಂತರ ಇಕ್ಕಟ್ಟಿಗೆ ಸಿಲುಕಿದ್ದು, ಉಭಯ ನಾಯಕರು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. 
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಇದೊಂದು ಸೌಹಾರ್ದಯುತ ಭೇಟಿಯಾಗಿದೆ. ರಾಜೀನಾಮೆ ನೀಡಿರುವ ಶಾಸಕರ ಮನವೊಲಿಕೆಯ ಯತ್ನಗಳು ನಡೆಯುತ್ತಿವೆ ಎಂದು ತಿಳಿಸಿದರು.
ಶಾಸಕರ ರಾಜೀನಾಮೆ ನಂತರ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಕುಮಾರಸ್ವಾಮಿ ಅಮೆರಿಕಾದಿಂದ ಇಂದು ಬೆಂಗಳೂರಿಗೆ ಬರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಪಕ್ಷದ ಶಾಸಕರೊಂದಿಗೆ ಸಭೆ ನಡೆಸಿದ್ದು, ಪ್ರಸ್ತುತದಲ್ಲಿನ ರಾಜ್ಯ ರಾಜಕೀಯದ  ಬಗ್ಗೆ ಚರ್ಚೆ ನಡೆಸಿದ್ದಾರೆ. 
ಸದ್ಯ ವಿಧಾನಸಭೆಯಲ್ಲಿರುವ ಶಾಸಕರ ಸಂಖ್ಯಾಬಲ 210 ಆಗಿದ್ದು, ಉಭಯ ಪಕ್ಷಗಳ  14 ಶಾಸಕರ ರಾಜೀನಾಮೆಯಿಂದಾಗಿ ಸಮ್ಮಿಶ್ರ ಸರ್ಕಾರ ಇದೀಗ 105ಕ್ಕೆ ಕುಸಿದಿದೆ. ಪ್ರತಿಪಕ್ಷ ಬಿಜೆಪಿಯ ಸಂಖ್ಯಾ ಬಲ 105 ಆಗಿದೆ.ಬಹುಮತಕ್ಕೆ 106 ಶಾಸಕರ ಬೆಂಬಲ ಅಗತ್ಯವಿದೆ. 
SCROLL FOR NEXT