ಶೋಭಾ ಕರಂದ್ಲಾಜೆ 
ರಾಜಕೀಯ

ಬಹುಮತ ಇಲ್ಲದ ಸರ್ಕಾರ, ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು- ಶೋಭಾ ಕರಂದ್ಲಾಜೆ

ಅತೃಪ್ತ ಶಾಸಕರ ರಾಜೀನಾಮೆಯಿಂದಾಗಿ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಇಲ್ಲದಂತಾಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆಯಿಂದಾಗಿ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಇಲ್ಲದಂತಾಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ,  ಕಾಂಗ್ರೆಸ್  ಶಾಸಕರು ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡಿ ಮತ್ತೊಂದು ಸರ್ಕಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಇದೇ ವೇಳೆ ನಾಗೇಶ್ ರಾಜೀನಾಮೆ ಕುರಿತಂತೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ಪಕ್ಷೇತರ ಶಾಸಕ ನಾಗೇಶ್ ಬಿಜೆಪಿಗೆ ಬರುವುದಾದರೆ ಸ್ವಾಗತಿಸುವುದಾಗಿ ಹೇಳಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಬಂಡಾಯ ಶಾಸಕರೊಂದಿಗೆ ನಾವು ಸಂಪರ್ಕದಲ್ಲಿ ಇಲ್ಲ. ಪಕ್ಷದ ತತ್ವ ಸಿದ್ದಾಂತ ಒಪ್ಪಿ ಬರುವವರಿಗೆ ಸ್ವಾಗತಿಸುವುದಾಗಿ ಅವರು ಹೇಳಿದರು.
ಮತ್ತೊಂದೆಡೆ ರಾಜಭವನವನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಆದರೆ, ಅಂತಹ ಸಂಸ್ಕೃತಿ ನಮ್ಮದಲ್ಲ, ಕಾಂಗ್ರೆಸ್ ಆಡಳಿತ ಇದ್ದಾಗ ರಾಜಭವವನ್ನು ದುರ್ಬಳಕೆ ಮಾಡಿಕೊಳ್ಳಲಾಗಿತ್ತು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಆರ್. ಅಶೋಕ್ ಹೇಳಿದ್ದಾರೆ.
ಕೆಲವು ಶಾಸಕರ ರಾಜೀನಾಮೆಯನ್ನು ಹರಿದು ಹಾಕಿದ ಕಾಂಗ್ರೆಸ್ ಪಕ್ಷ  ಈಗ ರಾಜ್ಯಪಾಲರ ಅಧಿಕಾರವನ್ನು ಪ್ರಶ್ನಿಸುತ್ತಿದೆ. ಅವರು ಭ್ರಮೆಯಲ್ಲಿದ್ದಾರೆ,  ಪರಿಸ್ಥಿತಿಯನ್ನು ಇನ್ನೂ  ರಕ್ಷಿಸಲು ಸಾಧ್ಯವಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಬಿಜೆಪಿ ಮುಖಂಡ ರೇಣುಕಾಚಾರ್ಯ  ಲೇವಡಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!