ಜೆಡಿಎಸ್ ಶಾಸಕರು ತೆರಳುತ್ತಿರುವ ಬಸ್ 
ರಾಜಕೀಯ

ಕೊಡಗು ಬದಲು ದೇವನಹಳ್ಳಿಯ ರೆಸಾರ್ಟ್ ಗೆ ಜೆಡಿಎಸ್ ಶಾಸಕರು ಶಿಫ್ಟ್

ಮೈತ್ರಿ ಸರ್ಕಾರದ ಶಾಸಕರು ರಾಜೀನಾಮೆ ನೀಡುತ್ತಿರುವ ಬೆನ್ನಲ್ಲೆ ಜೆಡಿಎಸ್ ಶಾಸಕರು ಕೊಡಗಿನ ರೆಸಾರ್ಟ್‍ಗೆ ಹೋಗಲು ಸಕಲ ಸಿದ್ಧತೆ ನಡೆಸಿದ್ದರು....

ಬೆಂಗಳೂರು: ಮೈತ್ರಿ ಸರ್ಕಾರದ ಶಾಸಕರು ರಾಜೀನಾಮೆ ನೀಡುತ್ತಿರುವ ಬೆನ್ನಲ್ಲೆ ಜೆಡಿಎಸ್ ಶಾಸಕರು ಕೊಡಗಿನ ರೆಸಾರ್ಟ್‍ಗೆ ಹೋಗಲು ಸಕಲ ಸಿದ್ಧತೆ ನಡೆಸಿದ್ದರು. ಆದರೆ ದಿಢೀರ್ ನಿರ್ಧಾರ ಬದಲಿಸಿದ ಜೆಡಿಎಸ್ ಶಾಸಕರು, ಕೊಡಗಿನ ಬದಲು ದೇವನಹಳ್ಳಿ ಬಳಿಯ ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಆಪರೇಷನ್ ಕಮಲದ ಭೀತಿಯಿಂದ ಜೆಡಿಎಸ್ ಶಾಸಕರನ್ನು ರಕ್ಷಿಸಲು ಸೋಮವಾರಪೇಟೆ ತಾಲೂಕಿನ ಪ್ಯಾಡಿಂಗ್ ಟನ್ ರೆಸಾರ್ಟ್‍ನಲ್ಲಿ ವಾಸ್ತವ್ಯಕ್ಕೆ ಕೊಠಡಿಗಳನ್ನು ಕಾಯ್ದಿರಿಸಲಾಗಿತ್ತು. ಅಲ್ಲಿ ಮೂರು ದಿನ ಉಳಿದುಕೊಳ್ಳಲು ಜೆಡಿಎಸ್ ನಾಯಕರು ನಿರ್ಧರಿಸಿದ್ದರು. ಆದರೆ ಮಡಿಕೇರಿಗೆ ಪ್ರಯಾಣಿಸಲು ತುಂಬ ಸಮಯ ಬೇಕು ಮತ್ತು ದಿಢೀರ್ ಬದಲಾವಣೆಯಾದರೆ ಬೆಂಗಳೂರಿಗೆ ವಾಪಸ್ ಬರುವುದು ಕಷ್ಟ ಎಂಬ ಕಾರಣಕ್ಕೆ ನಗರದ ದೇವನಹಳ್ಳಿಯ ಪ್ರೆಸ್ಟೀಜ್ ಗಾಲ್ಫ್ ಶೇರ್ ರೆಸಾರ್ಟಿಗೆ ಜೆಡಿಎಸ್ ಶಾಸಕರ ವಾಸ್ತವ್ಯಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.
ಶಾಸಕರು ತಂಗಿರುವ ರೆಸಾರ್ಟಿಗೆ ಪೊಲೀಸ್ ಸರ್ಪಗಾವಲು ಹಾಕಿದ್ದು, ಖಾಸಗಿ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ