ಶೀಘ್ರವೇ ನೂತನ ಸಂಪುಟ ಪುನಾರಚನೆ: ಅತೃಪ್ತರಿಗೆ ಸಿಎಂ ಕುಮಾರಸ್ವಾಮಿ
ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ನ 21 ಸಚಿವರು ರಾಜಿನಾಮೆ ನೀಡಿದ್ದು ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ...
ಬೆಂಗಳೂರು: ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ನ 21 ಸಚಿವರು ರಾಜಿನಾಮೆ ನೀಡಿದ್ದು ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ನಂತೆ ಜೆಡಿಎಸ್ ಸಚಿವರು ರಾಜಿನಾಮೆ ನೀಡಿದ್ದು ಶೀಘ್ರವೇ ಸಚಿವ ಸಂಪುಟವನ್ನು ಪುನಾರಚಿಸಲಾಗುವುದು ಎಂದು ಹೇಳಿದ್ದಾರೆ.
ಇಂದು ವಿಧಾನಸೌಧಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಸರ್ಕಾರಕ್ಕೆ ಏನು ಆಗುವುದಿಲ್ಲ ಎಂದು ಹೇಳಿದರು.
ಇನ್ನು ಬೆಳಗ್ಗೆ ಡಿಸಿಎಂ ಪರಮೇಶ್ವರ್ ಆಯೋಜಿಸಿದ್ದ ಉಪಹಾರ ಕೂಟದಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಸಚಿವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಇದನ್ನು ಸ್ವತಃ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ವಷ್ಟಪಡಿಸಿದ್ದರು.