ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟದ ಎಲ್ಲಾ ಸಚಿವರಿಂದ ರಾಜೀನಾಮೆ ಪಡೆದಿರುವುದಕ್ಕೆ ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂದು ಟ್ವೀಟ್ ಮಾಡಿರುವ ಅವರು, ರಾಜ್ಯದ ಜನರಿಗೆ ಸಚಿವರ ರಾಜೀನಾಮೆಯ ಅಗತ್ಯವಿಲ್ಲ. ಮೈತ್ರಿ ಸರ್ಕಾರದ ನಿಷ್ಕ್ರಿಯ ದುರಾಡಳಿತದಿಂದ ಬೇಸತ್ತಿರುವ ಜನರಿಗೆ ಬೇಕಾಗಿರುವುದು ಕುಮಾರಸ್ವಾಮಿ ಅವರ ರಾಜೀನಾಮೆಯೇ ಹೊರತು ಸಚಿವರ ರಾಜೀನಾಮೆಯಲ್ಲ. ಹೀಗಾಗಿ ಕುಮಾರಸ್ವಾಮಿ ಆದಷ್ಟು ಬೇಗ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.