ಮುಂಬಯಿಯಲ್ಲಿರುವ ಅತೃಪ್ತ ಶಾಸಕರು 
ರಾಜಕೀಯ

ಅನರ್ಹಗೊಳಿಸಿದರೂ ಸರಿ, ರಾಜಕೀಯ ನಿವೃತ್ತಿಗೂ ಸಿದ್ಧ ಆದರೆ ರಾಜೀನಾಮೆ ವಾಪಸ್ ಪಡೆಯಲ್ಲ: ಅತೃಪ್ತ ಶಾಸಕರು

ಯಾವುದೇ ಕಾರಣಕ್ಕೂ ರಾಜಿನಾಮೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ, ಒಂದು ವೇಳೆ ಸ್ಪೀಕರ್ ರಾಜಿನಾಮೆ ಅಂಗೀಕರಿಸಿದಿದ್ದರೇ ರಾಜಕೀಯ ನಿವೃತ್ತಿ ಪಡೆಯುವುದಾಗಿ ...

ಮುಂಬಯಿ: ಯಾವುದೇ ಕಾರಣಕ್ಕೂ ರಾಜಿನಾಮೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ, ಒಂದು ವೇಳೆ ಸ್ಪೀಕರ್ ರಾಜಿನಾಮೆ ಅಂಗೀಕರಿಸಿದಿದ್ದರೇ ರಾಜಕೀಯ ನಿವೃತ್ತಿ ಪಡೆಯುವುದಾಗಿ ಅತೃಪ್ತ ಶಾಸಕರು ಹೇಳಿದ್ದಾರೆ. ಒಂದು ವೇಳೆ ಸ್ಪೀಕರ್ ಕರೆದರೇ ಕೂಡಲೇ ಬೆಂಗಳೂರಿಗೆ ಬರುವುದಾಗಿ ತಿಳಿಸಿದ್ದಾರೆ.,
ಮುಂಬಯಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಭೈರತಿ ಬಸವರಾಜ್, ನಾವು ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸಿದ್ದೇವೆ, ನಾವು ಇನ್ನೂ ಕಾಂಗ್ರೆಸ್ ಪಕ್ಷದಲ್ಲೇ ಇದ್ದೇವೆ, ನಾವು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಕಾಂಗ್ರೆಸ್ ಗೆ ಬರುವ ಮೊದಲಿನಿಂದಲೂ ನಾನು ಕಾಂಗ್ರೆಸ್ ನಲ್ಲಿದ್ದೇನೆ. ಮುಂಬಯಿಗೆ ಆಟವಾಡಲು ಬಂದಿಲ್ಲ, ನಮ್ಮ ಖರ್ಚಿನಲ್ಲಿ ನಾವು ಇಲ್ಲಿಗೆ ಬಂದಿದ್ದೇವೆ, ನಾವು ಅಷ್ಟು ಸಮರ್ಥರಿದ್ದೇವೆ, ನಮ್ಮನ್ನು ಇಲ್ಲಿ ಯಾರೂ ಹಿಡಿದಿಟ್ಟಿಲ್ಲ, ನಮಗೆ ನೋವಾಗಿದ್ದರಿಂದ ನಾವು  ರಾಜಿನಾಮೆ ಸಲ್ಲಿಸಿದ್ದೇವೆ, ಒಂದು ವೇಳೆ ಸ್ಪೀಕರ್ ರಾಜಿನಾಮೆ ಅಂಗೀಕರಿಸದಿದ್ದರೇ ರಾಜಕೀಯ ನಿವೃತ್ತಿ ಪಜೆಯುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನೂ ಇದೇ ವೇಳೆ ಮಾತನಾಡಿದ ಸಿದ್ದರಾಮಯ್ಯ ಬಣದ ಮತ್ತೊಬ್ಬ ಆಪ್ತ ಶಾಸಕ ಎಸ್.ಟಿ ಸೋಮಶೇಖರ್, ನಾವು ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ, ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿರುವವರು  ಮಂತ್ರಿಗಳಾಗಿದ್ದಾರೆ, ನಮಗೂ ಕಾನೂನು ಗೊತ್ತಿದೆ, ನಮ್ಮ ವಿರುದ್ಧ ಒಂದು ನಿಯಮ ಉಲ್ಲಂಘನೆ ಆರೋಪವಿಲ್ಲ ಅನರ್ಹಗೊಳಿಸುವ ಕೆಲಸವನ್ನು ನಾವು ಮಾಡಿಲ್ಲ, ಗನ್ ಪಾಯಿಂಟ್ ಇಟ್ಟು ಯಾರನ್ನೂ ಹೆದರಿಸಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ನಾವು 10 ಜನ ಒಗ್ಗಟ್ಟಿಗಿದ್ದೇವೆ, ನಮ್ಮ ಕ್ಷೇತ್ರಗಳಲ್ಲಿರುವ ಸಮಸ್ಯೆ ಎಲ್ಲರಿಗೂ ತಿಳಿದಿದೆ, ಹೀಗಾಗಿ ನಾವು ರಾಜಿನಾಮೆ ನೀಡಿದ್ದಾಗಿ ಶಾಸಕ ಬಿ.ಸಿ ಪಾಟೀಲ್ ತಿಳಿಸಿದ್ದಾರೆ,  ನಾವ್ಯಾರು ಪಕ್ಷಕ್ಕೆ ರಾಜಿನಾಮೆ ನೀಡಿಲ್ಲ, ಯಾವುದೇ ಕಾರಣಕ್ಕೂ  ರಾಜಿನಾಮೆ ವಾಪಸ್ ಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!