ದಿನೇಶ್ ಗುಂಡೂರಾವ್ 
ರಾಜಕೀಯ

ರಾಜ್ಯಪಾಲರು ಬಿಜೆಪಿಯ ಏಜೆಂಟ್: ದಿನೇಶ್ ಗುಂಡೂರಾವ್ ಆರೋಪ

ಶಾಸಕರ ರಾಜೀನಾಮೆ ವಿಚಾರವನ್ನು ಆದಷ್ಟು ಬೇಗ ಇತ್ಯರ್ಥ ಮಾಡಿ ಎಂದು ಸ್ಪೀಕರ್ ಗೆ ರಾಜ್ಯಪಾಲರು ಒತ್ತಾಯ ಮಾಡಿದ್ದಾರೆ. ಗವರ್ನರ್ ಬಿಜೆಪಿಯ ಏಜೆಂಟ್ ರೀತಿ ...

ಬೆಂಗಳೂರು: ಶಾಸಕರ ರಾಜೀನಾಮೆ ವಿಚಾರವನ್ನು ಆದಷ್ಟು ಬೇಗ ಇತ್ಯರ್ಥ ಮಾಡಿ ಎಂದು ಸ್ಪೀಕರ್ ಗೆ ರಾಜ್ಯಪಾಲರು ಒತ್ತಾಯ ಮಾಡಿದ್ದಾರೆ. ಗವರ್ನರ್ ಬಿಜೆಪಿಯ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಕುಮಾರ ಕೃಪ ಅತಿಥಿ ಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ರಾಜಭವನವನ್ನ ಬಿಜೆಪಿ ದುರುಪಯೋಗ ಪಡಿಸಿಕೊಳ್ಳುತ್ತಿದೆ ಡಿ ಕೆ ಶಿವಕುಮಾರ್ ಅವರಿಗೆ ಹೋಟೆಲ್ ಬಳಿ ತಡೆ ಒಡ್ಡಿದ್ದಾರೆ. 
ಬಿಜೆಪಿ ಪಕ್ಷದವರು ಏನು  ಮಾಡುತ್ತಿದ್ದಾರೆ ಅಂತ ಗೊತ್ತಾಗುತ್ತಿದೆ. ಮುಂಬಯಿಯಲ್ಲಿರುವ ಹೋಟೆಲ್ ಸರ್ಕಾರಿ ಜಾಗ ಅಲ್ಲ. ಅದು ಖಾಸಗಿ ಹೋಟೆಲ್, ಡಿ ಕೆ ಶಿವಕುಮಾರ್ ಅಲ್ಲಿ ರೂಂ ಬುಕ್ ಮಾಡಿದ್ದಾರೆ ಆದರೂ ಅವರಿಗೆ ಒಳ ಪ್ರವೇಶಕ್ಕೆ ಅವಕಾಶ ನೀಡಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಆಪರೇಷನ್ ಕಮಲಕ್ಕೆ ಕೋಟಿ ಕೋಟಿ ಹಣ ಎಲ್ಲಿಂದ ಬರುತ್ತಿದೆ ಎಂದು ಪ್ರಶ್ನಿಸಿದ ಅವರು, ಅತೃಪ್ತರು ಸುಪ್ರೀಂ ಕೋರ್ಟ್ ಹೋಗೋದಕ್ಕೆ ಸ್ವಂತಂತ್ರರು ಎಂದು ಹೇಳಿದ್ದಾರೆ,  ನಮ್ಮ ಸ್ಪೀಕರ್ ರಮೇಶ್ ಕುಮಾರ್ ನಿಷ್ಪಕ್ಷಪಾತವಾಗಿ ಕೆಲಸ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!