ಆರ್.ಅಶೋಕ್ 
ರಾಜಕೀಯ

ನಾನು ಅತೃಪ್ತ ಶಾಸಕರನ್ನು ಭೇಟಿ ಮಾಡಿಲ್ಲ, ಮಾತನಾಡಿಲ್ಲ: ಆರ್. ಅಶೋಕ್

ನಮಗೂ ಅತೃಪ್ತ ಶಾಸಕರ ರಾಜಿನಾಮೆಗೂ ಯಾವುದೇ ಸಂಬಂಧವಿಲ್ಲ, ಯಾವುದೇ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ...

ಬೆಂಗಳೂರು: ನಮಗೂ ಅತೃಪ್ತ ಶಾಸಕರ ರಾಜಿನಾಮೆಗೂ ಯಾವುದೇ ಸಂಬಂಧವಿಲ್ಲ, ಯಾವುದೇ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಡಿಸಿಎಂ ಆರ್. ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅಶೋಕ್,  ಅತೃಪ್ತ ಶಾಸಕರು ಯಾರು ಎಂಬುದು ನನಗೆ ಗೊತ್ತಿಲ್ಲ, ಅವರು ಶಾಸಕ ಸ್ಥಾನಕ್ಕೆ ಮಾತ್ರ ರಾಜಿನಾಮೆ ನೀಡಿದ್ದಾರೆ,  ಸದಸ್ಯತ್ವಕ್ಕೆ ಯಾರೂ ರಾಜಿನಾಮೆ ನೀಡಿಲ್ಲ, ಇದಕ್ಕೆ ಬಿಜೆಪಿ ಕಾರಣವಲ್ಲ, ಸಿದ್ದರಾಮಯ್ಯ ಅವರೇ ಇದಕ್ಕೆ ಉತ್ತರಿಸಬೇಕು ಎಂದು ಹೇಳಿದ್ದಾರೆ.
ಒಂದು ವರ್ಷದಿಂದ ಶಾಸಕರನ್ನು ಚೆನ್ನಾಗಿ ನೋಡಿಕೊಳ್ಳಬೇಕಿತ್ತು, ನಾನು ಪಕ್ಷೇತರ ಶಾಸಕರನ್ನು ಮಾತ್ರ ಭೇಟಿ ಮಾಡಿದ್ದೇನೆ, ಬಿಜೆಪಿಗೆ ಬೆಂಬಲ ನೀಡುವಂತೆ ಕೋರಿದ್ದೇನೆ, ಬೇರೆ ಯಾವ ಬೆಂಗಳೂರು ಶಾಸಕರನ್ನು ನಾನು ಭೇಟಿ ಮಾಡಿಯೇ ಇಲ್ಲ, ನೋಡಿಯೂ ಇಲ್ಲ, ಮಾತನಾಡಿಯೂ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ,
ಅತೃಪ್ತ ಶಾಸಕರು ರಾಜಿನಾಮೆಗೆ ಕಾರಣವನ್ನು ಅವರು ನೀಡಿದ್ದಾರೆ, ಯಾರು ನನ್ನ ಮನೆಗೆ ಬಂದಿಲ್ಲ, ನಾನು ಯಾರ ಮನೆ ಬಾಗಿಲಿಗೂ ಹೋಗಿಲ್ಲ  ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೇತಮ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

Ramayana: ಕೊನೆಗೂ 'ರಾಮಾಯಣ' ರಿಲೀಸ್ ಡೇಟ್ ಫಿಕ್ಸ್; ದೀಪಾವಳಿಗೂ ಮೊದಲೇ ಬಿಡುಗಡೆ

ಯಮನಿಗೇ ಚಳ್ಳೇಹಣ್ಣು: ಗುದ್ದಿದ ಲಾರಿಯನ್ನೇ ಹಿಡಿದು ಪ್ರಾಣ ಉಳಿಸಿಕೊಂಡ ಯುವತಿ!-ರೋಚಕ Video