ಶಾಸಕ ಎಸ್.ಟಿ.ಸೋಮಶೇಖರ್ 
ರಾಜಕೀಯ

ಮುಂದುವರೆದ ಹೈಡ್ರಾಮಾ; ಅತೃಪ್ತ ಶಾಸಕ ಸೋಮಶೇಖರ್ ಗಾಗಿ ಕಾದು ಕುಳಿತ ಡಿಕೆಶಿ, ಮತ್ತೆ ಕೈ ಕೊಟ್ಟ ಶಾಸಕ

ಕರ್ನಾಟಕ ರಾಜಕೀಯ ಹೈಡ್ರಾಮ ತಡರಾತ್ರಿಯೂ ಮುಂದುವರೆದಿದ್ದು, ಶನಿವಾರ ರಾಜೀನಾಮೆ ನೀಡಿ ಮುಂಬೈ ಸೇರಿದ್ದ ಯಶವಂತಪುರ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ತಡರಾತ್ರಿ ಸುಮಾರು 1 ಗಂಟೆಗೆ ಬೆಂಗಳೂರಿಗೆ ಆಗಮಿಸಿದರು.

ಬೆಂಗಳೂರು: ಕರ್ನಾಟಕ ರಾಜಕೀಯ ಹೈಡ್ರಾಮ ತಡರಾತ್ರಿಯೂ ಮುಂದುವರೆದಿದ್ದು, ಶನಿವಾರ ರಾಜೀನಾಮೆ ನೀಡಿ ಮುಂಬೈ ಸೇರಿದ್ದ ಯಶವಂತಪುರ ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ತಡರಾತ್ರಿ ಸುಮಾರು 1 ಗಂಟೆಗೆ ಬೆಂಗಳೂರಿಗೆ ಆಗಮಿಸಿದರು. 
ಎಸ್.ಟಿ.ಸೋಮಶೇಖರ್ ಆಗಮಿಸುತ್ತಿದ್ದಂತೆ ಯಲಹಂಕ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಕಾಣಿಸಿಕೊಂಡರು. ವಿಮಾನ ನಿಲ್ದಾಣದಿಂದ ಎಸ್.ಟಿ.ಸೋಮಶೇಖರ್ ಹೊರ ಬರುತ್ತಿದ್ದಂತೆ ಮಾಧ್ಯಮಗಳನ್ನು ಕಂಡ ಕೂಡಲೇ ಬಿಜೆಪಿ ಶಾಸಕರು ಅಂತರ ಕಾಯ್ದುಕೊಂಡರು. ಇತ್ತ ಸೋಮಶೇಖರ್ ಕಾರನ್ನು ಹಿಂಬಾಲಿಸಿಕೊಂಡು ಎಸ್.ಆರ್.ವಿಶ್ವನಾಥ್ ಹೋದರು.  ಮಾಜಿ ಡಿಸಿಎಂ ಆರ್.ಅಶೋಕ್ ಅವರ ಸುಪರ್ದಿಯಲ್ಲಿಯೇ ಎಸ್.ಟಿ.ಸೋಮಶೇಖರ್ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗಿದೆ. 
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್.ಟಿ.ಸೋಮಶೇಖರ್, ನಾನು ಎಲ್ಲಿಯೂ ಹೋಗಿಲ್ಲ. ಈಗ ಬೆಂಗಳೂರಿಗೆ ಬಂದಿದ್ದೇನೆ. ಕೇವಲ ಶಾಸಕ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ನಲ್ಲಿಯೇ ಇದ್ದೇನೆ ಎಂದು ಹೇಳಿದರು. ಇಂದು ಕರ್ನಾಟಕ ವಸತಿ ಮಹಾಮಂಡಳಿ ಚುನಾವಣೆ ಹಿನ್ನೆಲೆ ಎಸ್.ಟಿ.ಸೋಮಶೇಖರ್ ಬೆಂಗಳೂರಿಗೆ ಆಗಮಿಸಿದ್ದಾರೆ ಎಂದು ಹೇಳಲಾಗುತ್ತಿದೆ. 
ಅತೃಪ್ತರ ಶಾಸಕರು ತಮ್ಮ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ಸುಪ್ರೀಂಕೋರ್ಟ್ ಗೆ ಬುಧವಾರ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. ಸುಪ್ರೀಂಕೋರ್ಟ್ ಆದೇಶವನ್ನು ನೋಡಿಕೊಂಡು ಅತೃಪ್ತರು ಬೆಂಗಳೂರಿಗೆ ಬರುವ ಕುರಿತು ಪ್ಲಾನ್ ಮಾಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ಮಧ್ಯ ರಾತ್ರಿಯವರೆಗೂ ಶಾಸಕನ ಮನೆ ಮುಂದೆ ಕಾದು ಕುಳಿತಿದ್ದ ಡಿಕೆಶಿ
ಏತನ್ಮಧ್ಯೆ ಬೆಂಗಳೂರಿಗೆ ಆಗಮಿಸಿದ ಅತೃಪ್ತ ಶಾಸಕ ಎಸ್ ಟಿ ಸೋಮಶೇಖರ್ ಅವರ ಮನವೊಲಿಕೆಗೆ ಸಚಿವ ಡಿಕೆ ಶಿವಕುಮಾರ್ ಯತ್ನಿಸಿದ್ದು, ಮತ್ತೆ ವಿಫಲರಾಗಿದ್ದಾರೆ. ಮಧ್ಯ ರಾತ್ರಿಯವರೆಗೂ ಶಾಸಕನ ಮನೆ ಮುಂದೆ ಡಿಕೆ ಶಿವಕುಮಾರ್ ಕಾದು ಕುಳಿತಿದ್ದರು. ಆದರೆ ಸೋಮಶೇಖರ್ ಮಾತ್ರ ಮನೆಗೆ ಬಾರದೇ ರಹಸ್ಯ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

ಮಗು ಆಡಿಸುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ; ರಕ್ಷಣೆಗೆ ಧಾವಿಸಿದ ಮಹಿಳೆ, Video ವೈರಲ್

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!