ರಾಮಲಿಂಗಾ ರೆಡ್ಡಿ 
ರಾಜಕೀಯ

ಕರೆದರೆ ಗುಲಾಂ ನಬಿ ಆಜಾದ್ ಅವರನ್ನು ಭೇಟಿ ಮಾಡುತ್ತೇನೆ: ರಾಮಲಿಂಗಾ ರೆಡ್ಡಿ

ಕಾಂಗ್ರೆಸ್ ನಾಯಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾ ರೆಡ್ಡಿ ಸಂಧಾನ ಮಾತುಕತೆಗೆ ಮುಕ್ತವಾಗಿದ್ದಾರೆ. ಪಕ್ಷದ ...

ಬೆಂಗಳೂರು: ಕಾಂಗ್ರೆಸ್ ನಾಯಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರಾಮಲಿಂಗಾ ರೆಡ್ಡಿ ಸಂಧಾನ ಮಾತುಕತೆಗೆ ಮುಕ್ತವಾಗಿದ್ದಾರೆ. ಪಕ್ಷದ ನಾಯಕರು ಕರೆದರೆ ಹೋಗಿ ಅವರನ್ನು ಭೇಟಿಯಾಗುತ್ತೇನೆ ಎಂದಿದ್ದಾರೆ.
ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರಿಂದ ಕರೆ ಬಂದಿದ್ದು ಅವರಿಗೆ ತಮ್ಮ ಸ್ಥಾನದ ಬಗ್ಗೆ ತಿಳಿಸಿದ್ದೇನೆ ಎಂದು ರಾಮಲಿಂಗಾ ರೆಡ್ಡಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಾನು ಎಸ್ ಟಿ ಸೋಮಶೇಖರ್, ಭೈರತಿ ಬಸವರಾಜ್ ಮತ್ತು ಮುನಿರತ್ನ ಅವರಿಗೆ ಪ್ರೇರಣೆ ಕೊಟ್ಟಿದ್ದು ಎಂದು ಹಲವರು ಮಾತನಾಡಿಕೊಳ್ಳುತ್ತಿದ್ದಾರೆ. ಆದರೆ ಅದು ಸುಳ್ಳು, ಅವರು ನನ್ನ ಬಳಿ ಬಂದು ರಾಜೀನಾಮೆ ಬಗ್ಗೆ ಮಾತನಾಡಿದರು, ನಾವೆಲ್ಲ ಒಟ್ಟಿಗೆ ರಾಜೀನಾಮೆ ಕೊಟ್ಟೆವು ಅಷ್ಟೆ ಎಂದರು. 
ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆಯೇ ಹೊರತು ಪಕ್ಷಕ್ಕಲ್ಲ ಎಂದು ಕೂಡ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದರು.
ಕೆಎಸ್ ಡಿಎಲ್ ಅಧ್ಯಕ್ಷರಾಗಿದ್ದ ಭೈರತಿ ಬಸವರಾಜ್ ಮತ್ತು ಕೈಗಾರಿಕಾ ಸಚಿವ ಕೆ ಜೆ ಜಾರ್ಜ್ ಅವರ ನಡುವೆ ಸರ್ಕಾರಿ ಅಧಿಕಾರಿಯ ವರ್ಗಾವಣೆ ವಿಚಾರದಲ್ಲಿ ಭಿನ್ನಾಭಿಪ್ರಾಯವುಂಟಾಗಿ ಅದು ತಾರಕಕ್ಕೇರಿತ್ತು. ಆಗ ಭೈರತಿ ಬಸವರಾಜ್ ಸಿದ್ದರಾಮಯ್ಯ ಬಳಿ ಬಂದು ದೂರು ನೀಡಿದಾಗ ಅವರು ಕೆ ಜೆ ಜಾರ್ಜ್ ಪರ ನಿಂತಿದ್ದರು. ಇದೇ ಕಾರಣಕ್ಕೆ ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಇವರ ಜೊತೆ ಸಿದ್ದರಾಮಯ್ಯನವರ ನಿಷ್ಠಾವಂತರೆನಿಸಿಕೊಂಡ ಮುನಿರತ್ನ ಮತ್ತು ಎಸ್ ಟಿ ಸೋಮಶೇಖರ್ ಕೂಡ ರಾಜೀನಾಮೆ ಕೊಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!